Sunday, September 22, 2024
spot_img
More

    Latest Posts

    ಶಿರಸಿಯ ಕಾರ್ತಿಕ್ ಶೆಟ್ಟಿ ಇನ್ನು ಚಾರ್ಟರ್ಡ್ ಅಕೌಂಟೆಂಟ್

    ಬೆಂಗಳೂರು: ಶಿರಸಿಯ ಮರಾಠಿಕೊಪ್ಪದ ಕಾರ್ತಿಕ್ ಶೆಟ್ಟಿ ಅವರು 2020ರಲ್ಲಿ ನಡೆದ ಚಾರ್ಟರ್ಡ್ ಅಕೌಂಟೆನ್ಸಿ (ಸಿಎ) ಪರೀಕ್ಷೆಯಲ್ಲಿ ತೇರ್ಗಡೆ ಆಗುವ ಮೂಲಕ ಚಾರ್ಟರ್ಡ್ ಅಕೌಂಟೆಂಟ್ ಆಗಿರುತ್ತಾರೆ.

    ವಿಶೇಷವೆಂದರೆ ಇವರು ಶಿರಸಿ ತಾಲೂಕಿನಲ್ಲಿ ಗಾಣಿಗ ಸಮಾಜದಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆ ಉತ್ತೀರ್ಣರಾಗಿರುವ ಪ್ರಥಮ ವ್ಯಕ್ತಿ ಎನಿಸಿಕೊಂಡಿದ್ದಾರೆ. ಇವರು ಬೆಂಗಳೂರಿನಲ್ಲಿದ್ದು ಪರೀಕ್ಷೆ ಬರೆದಿದ್ದರೂ ಪದವಿವರೆಗೂ ಊರಿನಲ್ಲಿಯೇ ವಿದ್ಯಾಭ್ಯಾಸ ಮಾಡಿರುತ್ತಾರೆ.

    ಕಾರ್ತಿಕ್ ಶಿರಸಿಯ ಸಹಾಯ ಟ್ರಸ್ಟ್ ಅಧ್ಯಕ್ಷ ಸತೀಶ ಆರ್. ಶೆಟ್ಟಿ ಮತ್ತು ಶಾರದಾ ಎಸ್. ಶೆಟ್ಟಿ ದಂಪತಿಯ ಪುತ್ರ. ಇವರು ಶಿರಸಿಯ ಅವೆಮರಿಯಾ ಪ್ರಾಥಮಿಕ ಶಾಲೆ, ಅವೆಮರಿಯಾ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮುಗಿಸಿ, ನಂತರ ಶಿರಸಿಯ ಪ್ರಥಮ ದರ್ಜೆ ಸರ್ಕಾರಿ ಪದವಿ ಕಾಲೇಜ್‌ನಲ್ಲಿ ಬಿ.ಕಾಂ. ಪದವೀಧರರಾಗಿ ಹೊರಹೊಮ್ಮಿರುತ್ತಾರೆ.


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!