Saturday, September 21, 2024
spot_img
More

    Latest Posts

    ಪುರಾಣ ಪ್ರಸಿದ್ಧ ಶ್ರೀರಾಮಚಂದ್ರ ದೇವಸ್ಥಾನದಲ್ಲಿ ವರ್ಧಂತಿ ಉತ್ಸವ ಸಂಪನ್ನ

    ಬೆಂಗಳೂರು: ಕುಮಟಾ ತಾಲೂಕಿನ ಚಿತ್ರಗಿಯಲ್ಲಿ ಗಾಣಿಗ ಸಮುದಾಯದ ಉಸ್ತುವಾರಿಯಲ್ಲಿ ಇರುವ ಪುರಾಣ ಪ್ರಸಿದ್ಧ ಶ್ರೀರಾಮಚಂದ್ರ ಮಠದಲ್ಲಿ ವರ್ಷಂಪ್ರತಿ ನಡೆಯುವ ವರ್ಧಂತಿ ಉತ್ಸವ ವಿಧ್ಯುಕ್ತವಾಗಿ ನೆರವೇರಿ ಸಂಪನ್ನಗೊಂಡಿತು. ಪ್ರತಿವರ್ಷದಂತೆ ಈ ವರ್ಷವೂ ಶ್ರೀರಾಮಚಂದ್ರ ದೇವರ ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವವನ್ನು ಸಂಭ್ರಮ-ಸಡಗರದಿಂದ ಆಯೋಜಿಸಲಾಗಿದ್ದು, ಅದು ಮಾ. 22ರ ಸೋಮವಾರದಂದು ಅಪಾರ ಭಕ್ತರ ಸಮ್ಮುಖದಲ್ಲಿ ನಡೆಯಿತು.

    ಅಂದು ಬೆಳಗ್ಗೆಯಿಂದಲೇ ವಿಶೇಷ ಪೂಜೆ-ಪುನಸ್ಕಾರಗಳು ಆರಂಭಗೊಂಡಿದ್ದು, ರಾತ್ರಿಯವರೆಗೂ ಮುಂದುವರಿದಿತ್ತು. ಶ್ರೀ ರಾಮಚಂದ್ರ ದೇವರಿಗೆ ವಿಶೇಷ ಪೂಜೆ ಹವನ, ಮಧ್ಯಾಹ್ನ ಅನ್ನಸಂತರ್ಪಣೆ ಹಾಗೂ ಸಂಜೆ ರಂಗಪೂಜೆ ಬಲಿ ಪೂಜೆ ಮಾತ್ರವಲ್ಲದೆ ಶ್ರೀ ರಾಮಚಂದ್ರ ದೇವರ ಪಲ್ಲಕ್ಕಿ ಉತ್ಸವ ಕೂಡ ನಡೆಯಿತು. ನಂತರ ನೆರೆದಿದ್ದ ಭಕ್ತರಿಗೆಲ್ಲ ಮಹಾಮಂಗಳಾರತಿ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು.

    ದೇವಾಲಯದ ಮೊಕ್ತೇಸರರಾದ ರತ್ನಾಕರ ಸುಬ್ರಾಯ ಶೆಟ್ಟಿ ಹಾಗೂ ಸತೀಶ್ ಕೃಷ್ಣ ಶೆಟ್ಟಿ ಅವರ ಮುಂದಾಳತ್ವದಲ್ಲಿ ಈ ಎಲ್ಲ ಪೂಜೆ-ಪುನಸ್ಕಾರಗಳು ಸಾಂಗವಾಗಿ ನೆರವೇರಿದ್ದು, ಸಮಾಜಬಾಂಧವರೂ ಸೇರಿ ಹಲವಾರು ಭಕ್ತಾದಿಗಳು ದೇವರ ಕೃಪೆಗೆ ಪಾತ್ರರಾದರು.

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ ಈ ಕೆಳಗಿನ 'ಐಡಿ'ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ.
    G-Mail ID: [email protected]

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!