Saturday, September 21, 2024
spot_img
More

    Latest Posts

    ಗಾಣಿಗ ಸಮಾಜದ 22 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

    ಬೆಂಗಳೂರು: ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘವು ಇತ್ತೀಚೆಗೆ ಸಾಮೂಹಿಕ ಬ್ರಹ್ಮೋಪದೇಶ, ರಾಮ ನವಮಿ ಹಾಗೂ ಸತ್ಯನಾರಾಯಣ ಪೂಜೆಯನ್ನು ಆಯೋಜಿಸಿದ್ದು, ಇವು ಕುಂದಾಪುರದ ವ್ಯಾಸರಾಜ ಕಲಾಮಂದಿರದಲ್ಲಿ ವಿಧ್ಯುಕ್ತವಾಗಿ ನೆರವೇರಿದವು.

    ಸಂಘ ಆಯೋಜಿಸಿದ್ದ ಈ ಸಮಾರಂಭದಲ್ಲಿ ಗಾಣಿಗ ಸಮಾಜದ 22 ವಟುಗಳಿಗೆ ಉಪನಯನ ನೆರವೇರಿಸಲಾಯಿತು. ವ್ಯಾಸರಾಜ ಮಠದ ಅರ್ಚಕ ವಿಜಯ ಪೆಜತ್ತಾಯ ಅವರ ಪೌರೋಹಿತ್ಯದಲ್ಲಿ ಪೂಜಾವಿಧಿಗಳು ನೆರವೇರಿದ್ದು, ವಟುಗಳಿಗೆ ಬ್ರಹ್ಮೋಪದೇಶವನ್ನು ನೀಡಲಾಯಿತು.

    ವಿವಿಧ ಕ್ಷೇತ್ರಗಳಲ್ಲಿ ತಮ್ಮ ಕಾರ್ಯ ಚಟುವಟಿಕೆಗಳಿಂದ ಸಾಧನೆ ಮಾಡಿರುವ ಗಾಣಿಗ ಸಮಾಜದ ಹಲವಾರು ಸಾಧಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಿ, ಶುಭ ಹಾರೈಸಲಾಯಿತು. ಗಾಣಿಗ ಸೇವಾ ಸಂಘದ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಶಿ ಅವರ ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಿತು.

    ಬ್ರಹ್ಮೋಪದೇಶ ಪಡೆದ ವಟುಗಳ ಜೊತೆ ಸಮಾಜದ ಗಣ್ಯರು.

    ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಂಟಿ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಈ ಸಮಾರಂಭದ ಮುಖ್ಯ ಅತಿಥಿಯಾಗಿದ್ದರು. ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ.ಎಂ. ಲಕ್ಷ್ಮಣ ಉಪಸ್ಥಿತರಿದ್ದು, ಶುಭ ಹಾರೈಸಿದರು.

    ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು, ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ ಬೀಜಾಡಿ, ಶಿಕ್ಷಕ ಸುಬ್ರಹ್ಮಣ್ಯ ಜಿ. ಉಪ್ಪುಂದ ಮುಂತಾದವರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಮತ್ತೆ ಗಾಣಿಗ ಸಮಾಜದ ಉಸ್ತುವಾರಿಯಲ್ಲಿ ವ್ಯಾಸರಾಜ ಮಠ

    ಸಂಬಂಧಿತ ಸುದ್ದಿ: ಏ.1ರಂದು ಶ್ರೀಮದ್ ವ್ಯಾಸರಾಜರ 480ನೇ ಆರಾಧನಾ ಮಹೋತ್ಸವ

    ಸಂಬಂಧಿತ ಸುದ್ದಿ: ಶ್ರೀ ಲಕ್ಷ್ಮೀಂದ್ರ ತೀರ್ಥರಿಂದ ಮಾ.16ರಂದು ವ್ಯಾಸರಾಜ ಮಠದಲ್ಲಿ ಮುದ್ರಾಧಾರಣೆ- ಆಶೀರ್ವಚನ

    ಸಂಬಂಧಿತ ಸುದ್ದಿ: ದಶಮಾನೋತ್ಸವದ ಸಂಭ್ರಮದಲ್ಲಿ ಕೋಟೇಶ್ವರ ಗಾಣಿಗ ಯುವ ಸಂಘಟನೆ 

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ ಈ ಕೆಳಗಿನ 'ಐಡಿ'ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ.
    G-Mail ID: [email protected]

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!