Saturday, September 21, 2024
spot_img
More

    Latest Posts

    ಸ್ವಾತಂತ್ರ್ಯದ ಅಮೃತ ಮಹೋತ್ಸವ; ಬಾರ್ಕೂರು ದೇವಳದಲ್ಲಿ ಧ್ವಜಾರೋಹಣ, ಶ್ರಮದಾನ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾಗಿರುವ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲೂ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂಭ್ರಮ ಕಂಡುಬಂದಿದೆ.

    ದೇವಸ್ಥಾನದ ಆವರಣದಲ್ಲಿ ನಿನ್ನೆ ರಾಷ್ಟ್ರಧ್ವಜ ಆರೋಹಣ ಮಾಡಿ, ಗೌರವ ವಂದನೆ ಸಲ್ಲಿಸಿದ್ದಲ್ಲದೆ, ದೇವಳದ ಪರಿಸರದಲ್ಲಿ ಶ್ರಮದಾನ ಮಾಡುವ ಮೂಲಕ ಸ್ವಾತಂತ್ರ್ಯದ ದಿನವನ್ನು ಆಚರಿಸಿ ಸ್ಮರಣೀಯಗೊಳಿಸಲಾಯಿತು.

    ಬಾರ್ಕೂರು ಸೋಮಕ್ಷತ್ರಿಯ ಗಾಣಿಗ ಸಮಾಜ ಹಾಗೂ ಶ್ರೀವೇಣುಗೋಪಾಲಕೃಷ್ಣ ಯುವಕ ಸಂಘ ಜಂಟಿಯಾಗಿ ಈ ಕಾರ್ಯಕ್ರಮವನ್ನು ಕೈಗೊಂಡಿದೆ. ಸೋಮಕ್ಷತ್ರಿಯ ಗಾಣಿಗ ಸಮಾಜದ ಉಪಾಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ ಅವರು ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯಕ್ಕಾಗಿ ಜೀವನವನ್ನು ಮುಡಿಪಾಗಿರಿಸಿ ಬಲಿದಾನಗೈದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲಾಯಿತು.

    ಧ್ವಜಾರೋಹಣ

    ಧ್ವಜಾರೋಹಣದ ಬಳಿಕ ಎರಡೂ ಸಂಘಟನೆಗಳ ಸದಸ್ಯರು ದೇವಸ್ಥಾನದ ವಠಾರ ಹಾಗೂ ದೇವಸ್ಥಾನಕ್ಕೆ ಬರುವ ದಾರಿಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನಗೈದರು. ಯುವಕ ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಹಾರಾಡಿ, ಅಧ್ಯಕ್ಷ ಸುರೇಶ್ ಬಾರ್ಕೂರು, ಬಾರ್ಕೂರು ವಲಯಾಧ್ಯಕ್ಷ ರಾಮಕೃಷ್ಣ ಹಾಗೂ ಸರ್ವಸದಸ್ಯರು ಮತ್ತು ದೇವಳದ ವ್ಯವಸ್ಥಾಪಕ ಗೋಪಾಲಣ್ಣ ಮುಂತಾದವರು ಉಪಸ್ಥಿತರಿದ್ದರು.

    ಶ್ರಮದಾನ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತ್ಯುತ್ಸವ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಅನ್ನಸಂತರ್ಪಣೆ ಪುನರಾರಂಭ

    ಸಂಬಂಧಿತ ಸುದ್ದಿ: ಬಾರ್ಕೂರು ಗಾಣಿಗ ಸಂಘದ ಅಧ್ಯಕ್ಷರಾಗಿ ವಾಸುದೇವ ಬೈಕಾಡಿ ಅವಿರೋಧ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!