Saturday, September 21, 2024
spot_img
More

    Latest Posts

    ರತ್ನಾಕರ ಗಾಣಿಗ ಅವರಿಗೆ ‘ಉತ್ತಮ ಕೃಷಿಕ’ ಪ್ರಶಸ್ತಿ ಪ್ರದಾನ


    ಬೆಂಗಳೂರು: ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ರತ್ನಾಕರ ಗಾಣಿಗ ಅವರಿಗೆ ‘ಉತ್ತಮ ಕೃಷಿಕ’ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

    ಕುಂದಾಪುರದ ಕಾವ್ರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಮಹಾಸಭೆಯಲ್ಲಿ ರತ್ನಾಕರ ಗಾಣಿಗ ಅವರಿಗೆ ಇತ್ತೀಚೆಗೆ ‘ಉತ್ತಮ ಕೃಷಿಕ’ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.

    ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ನಿರ್ದೇಶಕರಾಗಿಯೂ ರತ್ನಾಕರ ಗಾಣಿಗ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

    ರತ್ನಾಕರ ಅವರು ಬಳ್ಕೂರು ಹಾಲು ಉತ್ಪಾದಕ ಸಹಕಾರಿ ಸಂಘ ನಿಯಮಿತದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಕುಂದಾಪುರ ವ್ಯಾಸರಾಜ ಮಠದ ಆಡಳಿತ ಮಂಡಳಿ ಸದಸ್ಯರಾಗಿ ಹಾಗೂ ಗಾಣಿಗ ಸಂಘಟನೆ ಬಳ್ಕೂರು ಘಟಕದ ಅಧ್ಯಕ್ಷರಾಗಿಯೂ ಜವಾಬ್ದಾರಿ ನಿಭಾಯಿಸಿದ್ದರು.

    ರತ್ನಾಕರ ಗಾಣಿಗ ಅವರು ಕೃಷಿಯಲ್ಲಿ ಹೆಸರುವಾಸಿ ಆಗಿದ್ದ ಹಾಗೂ ಕಂಬಳದ ಓಟದಲ್ಲೂ ಖ್ಯಾತಿ ಪಡೆದಿದ್ದ ಬಳ್ಕೂರು ಗಣಪಯ್ಯ ಗಾಣಿಗ ಅವರ ಪುತ್ರ. ಗಣಪಯ್ಯ ಗಾಣಿಗ ಅವರು ಅಕ್ಟೋಬರ್‌ 12ರಂದು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

    ಸಂಬಂಧಿತ ಸುದ್ದಿ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ರತ್ನಾಕರ ಗಾಣಿಗ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!