Saturday, September 21, 2024
spot_img
More

    Latest Posts

    ರೈತರ ಆದಾಯ ದ್ವಿಗುಣಗೊಳಿಸಲು, ಉದ್ಯೋಗಾವಕಾಶ ಕಲ್ಪಿಸಲು ಪೂರ್ವಭಾವಿ ಸಭೆ ನಡೆಸಿದ ಬಿ.ಜೆ. ಪುಟ್ಟಸ್ವಾಮಿ

    ಬೆಂಗಳೂರು: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಗಾಣಿಗ ಸಮುದಾಯದ ಮುಖಂಡರೂ ಆಗಿರುವ ಬಿ.ಜೆ. ಪುಟ್ಟಸ್ವಾಮಿ ಅವರು ರಾಜ್ಯದ ಹಿತಕ್ಕಾಗಿ ಮೇಲಿಂದ ಮೇಲೆ ಸಭೆ ನಡೆಸಿ ಸೂಕ್ತ ಕ್ರಮಕ್ಕಾಗಿ ಸೂಚನೆ ನೀಡುತ್ತಿದ್ದಾರೆ.

    ಆ ನಿಟ್ಟಿನಲ್ಲಿ ಕೆಲವು ದಿನಗಳ ಹಿಂದೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮಟ್ಟದಲ್ಲಿ ಸಭೆ ನಡೆಸಿದ್ದ ಅವರು ನಿನ್ನೆ ರಾಜ್ಯಮಟ್ಟದ ಯೋಜನೆಗಳ ಅನುಷ್ಠಾನಕ್ಕಾಗಿಯೂ ಪೂರ್ವಭಾವಿ ಸಭೆ ನಡೆಸಿ ಸಮಾಲೋಚನೆ ಮಾಡಿದ್ದಾರೆ.

    ನಿನ್ನೆ ನಡೆದ ಪೂರ್ವಭಾವಿ ಸಭೆಯಲ್ಲಿ ಬಿ.ಜೆ.ಪುಟ್ಟಸ್ವಾಮಿ ಮತ್ತಿತರರು.

    ನಿನ್ನೆ ಯೋಜನಾ ಆಯೋಗದ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ಕರೆದಿದ್ದ ಅವರು ವಿವಿಧ ಯೋಜನೆಗಳ ಕುರಿತು ಚರ್ಚೆ ನಡೆಸಿದರು. ಅಲ್ಲದೆ ರೈತರ ಆದಾಯ ದ್ವಿಗುಣಗೊಳಿಸುವುದು, ಉದ್ಯೋಗಾವಕಾಶ ಕಲ್ಪಿಸುವುದು ಮತ್ತು ಹಣಕಾಸು ತರ್ಕಬದ್ಧಗೊಳಿಸುವಿಕೆ ವಿಷಯಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಈ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಿದರು.

    ನಿನ್ನೆ ನಡೆದ ಪೂರ್ವಭಾವಿ ಸಭೆಯ ಒಂದು ದೃಶ್ಯ

    ಇನ್ನು ಅಕ್ಟೋಬರ್‌ 12ರಂದು ತಮ್ಮದೇ ಅಧ್ಯಕ್ಷತೆಯಲ್ಲಿ ಮತ್ತೊಂದು ಸಭೆ ನಡೆಸಿದ್ದ ಬಿ.ಜೆ. ಪುಟ್ಟಸ್ವಾಮಿ, ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ತಾಂತ್ರಿಕತೆಯ ದೋಷ, ಕಳಪೆ ಕಾಮಗಾರಿ ನಿವಾರಣೆ ನಿಟ್ಟಿನಲ್ಲಿ ಚರ್ಚಿಸಿದರು. ಅಲ್ಲದೆ ಕಟ್ಟಡ ನಕ್ಷೆ ಮಂಜೂರಾತಿ ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿಯೂ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು.

    ಅಕ್ಟೋಬರ್‌ 12ರಂದು ನಡೆದಿದ್ದ ಸಭೆಯಲ್ಲಿ ಬಿ.ಜೆ.ಪುಟ್ಟಸ್ವಾಮಿ ಮತ್ತಿತರರು.

    ಈ ಸಭೆಯಲ್ಲಿ ಆಯೋಗದ ಸದಸ್ಯರಾದ ಬಿ.ಎಸ್. ಸತ್ಯನಾರಾಯಣ, ಕ್ಯಾ.ಎಸ್.ರಾಜ ರಾವ್, ಬಿ.ವಿ. ಆನಂದ್ ಮತ್ತು ಬಿಬಿಎಂಪಿ ಮುಖ್ಯ ಇಂಜಿನಿಯರ್ ಮೋಹನ್ ಕೃಷ್ಣ, ನಗರ ಯೋಜನೆ ಅಪರ ನಿರ್ದೇಶಕ ಸುನೀಲ್ ಕುಮಾರ್‌ ಮತ್ತಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

    ಅಕ್ಟೋಬರ್‌ 12ರಂದು ನಡೆದಿದ್ದ ಸಭೆಯ ಒಂದು ದೃಶ್ಯ.

    ಸಂಬಂಧಿತ ಸುದ್ದಿ: ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಗಾಣಿಗರೇ ನಿರ್ಣಾಯಕ; ರಮೇಶ ಭೂಸನೂರ ಗೆಲ್ಲುವ ಸಾಧ್ಯತೆ ಅತ್ಯಧಿಕ

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!