Saturday, September 21, 2024
spot_img
More

    Latest Posts

    ಗಾಣಿಗ ಸಮಾಜದ ಪ್ರತಿಭಾವಂತರಿಗಿಲ್ಲಿದೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ಉಚಿತ ತರಬೇತಿ

    ಬೆಂಗಳೂರು: ಗಾಣಿಗ ಸಮಾಜದ ಹಲವಾರು ಸಂಘ-ಸಂಘಟನೆಗಳು ಸಮುದಾಯದ ವಿದ್ಯಾರ್ಥಿಗಳಿಗಾಗಿ ಹಲವು ಶೈಕ್ಷಣಿಕ ಕಾರ್ಯಕ್ರಮಗಳನ್ನು ನಡೆಸಿವೆ, ನಡೆಸುತ್ತಿವೆ. ಆ ಪೈಕಿ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಮಾತೃಸಂಘವೂ ಪ್ರಮುಖವಾದುದು.

    ಶತಮಾನೋತ್ಸವದ ಹೊಸ್ತಿಲಲ್ಲಿ ಇರುವ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಮಾತೃಸಂಘದ ಸಹಸಂಸ್ಥೆ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ.) ಸಮಾಜದ ಪ್ರತಿಭಾವಂತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತ ತರಬೇತಿಯನ್ನು ಉಚಿತವಾಗಿ ನೀಡಲು ಮುಂದಾಗಿದೆ.

    ಐಎಎಸ್, ಪಿಎಸ್‌ಐ, ಕಾನ್‌ಸ್ಟೇಬಲ್, ಎಫ್‌ಡಿಎ, ಎಸ್‌ಡಿಎ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಬಯಸುವ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಈ ಟ್ರಸ್ಟ್ ಉಚಿತವಾಗಿ ತರಬೇತಿ ನೀಡಲಿದೆ. ಕನಿಷ್ಠ ಪಿಯುಸಿ ವ್ಯಾಸಂಗ ಮುಗಿಸಿರುವ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಬಹುದು. ಆಸಕ್ತರು ನವೆಂಬರ್ 4ರ ಒಳಗೆ ತಮ್ಮ ವಿವರಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಟ್ರಸ್ಟ್ ತಿಳಿಸಿದೆ.

    ನೋಂದಣಿಗೆ ಈ ಲಿಂಕ್ ಕ್ಲಿಕ್ಕಿಸಿ: https://forms.gle/fuZn313fBvXLtfaw9

    ಹೆಚ್ಚಿನ‌ ಮಾಹಿತಿಗೆ ಸಂಪರ್ಕಿಸಿ: ತರಬೇತಿ ಶಿಬಿರ ಕುರಿತ ಹೆಚ್ಚಿನ‌ ಮಾಹಿತಿಗಾಗಿ ದಕ್ಷಿಣಕನ್ನಡ ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಮಾತೃಸಂಘ (ರಿ.) ಅಧ್ಯಕ್ಷ ತಾರಾನಾಥ್ ಸುವರ್ಣ (9343375461) ಅಥವಾ ಬ್ಯಾರಿಸ್ಟರ್ ಅತ್ತಾವರ ಎಲ್ಲಪ್ಪ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ.) ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ಟರ್ (9449471129) ಸಂಪರ್ಕಿಸಬಹುದು.

    ಸಂಬಂಧಿತ ಸುದ್ದಿ: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಸೇವೆ 12 ಜಿಲ್ಲೆಗಳಿಗೆ ವಿಸ್ತರಣೆ

    ಸಂಬಂಧಿತ ಸುದ್ದಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ವಿದ್ಯಾರ್ಥಿಗಳು

    ಸಂಬಂಧಿತ ಸುದ್ದಿ: ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಗಾಣಿಗರೇ ನಿರ್ಣಾಯಕ; ರಮೇಶ ಭೂಸನೂರ ಗೆಲ್ಲುವ ಸಾಧ್ಯತೆ ಅತ್ಯಧಿಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!