Saturday, September 21, 2024
spot_img
More

    Latest Posts

    ಗಾಣಿಗ ಸಮಾಜದ ರ‌್ಯಾಂಕ್ ವಿದ್ಯಾರ್ಥಿಗಳಿಗೆ ಎಸ್‌ಜಿಇಸಿಟಿ ನೀಡಲಿದೆ ವಿದ್ಯಾಜ್ಯೋತಿ ಪ್ರಶಸ್ತಿ

    ಬೆಂಗಳೂರು: ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಇರುವ ಸಂಘಟನೆಗಳಲ್ಲಿ ಒಂದಾಗಿರುವ ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಇದೀಗ ಇನ್ನೊಂದು ಕಾರ್ಯಕ್ರಮ ಹಮ್ಮಿಕೊಂಡಿದೆ.

    ಗಾಣಿಗ ಸಮುದಾಯದ ರ‌್ಯಾಂಕ್ ಗಳಿಸಿದ ವಿದ್ಯಾರ್ಥಿಗಳಿಗೆ ಅದು ವಿದ್ಯಾಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅದಕ್ಕಾಗಿ ಅರ್ಹರಿಂದ ಅರ್ಜಿಯನ್ನೂ ಆಹ್ವಾನಿಸಿದೆ.

    2019-20 ಮತ್ತು 2020-21ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ‌್ಯಾಂಕ್ ಗಳಿಸಿರುವ ಗಾಣಿಗ ಸಮುದಾಯದ ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಇಂಜಿನಿಯರಿಂಗ್‌, ಮೆಡಿಕಲ್‌, ಆಯುರ್ವೇದ, ಪಿಎಚ್‌ಡಿ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದವರು ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

    ಅಂದಹಾಗೆ ಇದು ದಕ್ಷಿಣ ಕರ್ನಾಟಕ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಕೊಡಗು, ದಕ್ಷಿಣಕನ್ನಡ, ಉತ್ತರಕನ್ನಡ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ ಮತ್ತು ಉಡುಪಿ ಜಿಲ್ಲೆಗಳ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗಷ್ಟೇ ಇದು ಅನ್ವಯಿಸುತ್ತದೆ.

    ಆಸಕ್ತರು ತಮ್ಮ ಅಂಕಪಟ್ಟಿಯ ಪ್ರತಿಯ ಜೊತೆಗೆ ಜಾತಿ ಪ್ರಮಾಣಪತ್ರ (ಆಕಾಂಕ್ಷಿ ಅಥವಾ ಅವರ ಪೋಷಕರದ್ದು), ಆಧಾರ್‌ ಕಾರ್ಡ್‌ ವಿವರ, ವಿದ್ಯಾಭ್ಯಾಸ ಪಡೆದ ಇತ್ತೀಚಿನ ಶೈಕ್ಷಣಿಕ ಸಂಸ್ಥೆಯ ವಿವರಗಳೊಂದಿಗೆ [email protected] ಇಲ್ಲಿಗೆ ನವೆಂಬರ್‌ 15ರ ಒಳಗೆ ಇ-ಮೇಲ್‌ ಮಾಡಬೇಕು.

    ಸಂಬಂಧಿತ ಸುದ್ದಿ: ಎಸ್​ಜಿಇಸಿಟಿಯಿಂದ ಮತ್ತೊಂದು ಮಹತ್ಕಾರ್ಯ; ಗಾಣಿಗ ಸಮಾಜದ 19 ಮಹತ್ವಾಕಾಂಕ್ಷಿಗಳಿಗೆ ಯುಪಿಎಸ್​ಸಿ/ಕೆಪಿಎಸ್​ಸಿ ತರಬೇತಿ

    ಸಂಬಂಧಿತ ಸುದ್ದಿ: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಸೇವೆ 12 ಜಿಲ್ಲೆಗಳಿಗೆ ವಿಸ್ತರಣೆ

    ಸಂಬಂಧಿತ ಸುದ್ದಿ: ಗಾಣದ ಪರಂಪರೆ ಉಳಿಸಲು ಹೀಗೊಂದು ಸಂಪ್ರದಾಯ…

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!