Saturday, September 21, 2024
spot_img
More

    Latest Posts

    ಮುಂಬೈನಲ್ಲಿ ಶ್ರೀನಿವಾಸ ಸಫಲ್ಯ, ಕುಡುಪಿನಲ್ಲಿ ಪ್ರೇಮಾನಂದ ಬಿಜೈ ಅವರಿಗೆ ಸನ್ಮಾನ

    ಬೆಂಗಳೂರು: ಮುಂಬೈ ಹಾಗೂ ಮಂಗಳೂರಿನಲ್ಲಿ ನಡೆದ ಎರಡು ಪ್ರತ್ಯೇಕ ಸಮಾರಂಭಗಳಲ್ಲಿ ಗಾಣಿಗ ಸಮಾಜದ ಇಬ್ಬರು ಪ್ರಮುಖರಿಗೆ ಸನ್ಮಾನ ನಡೆದಿದೆ. ಮಹಾರಾಷ್ಟ್ರದ ಸಾಂತಾಕ್ರೂಜ್‌ನಲ್ಲಿ ಸೆಲ್ಯೂಟ್‌ ತಿರಂಗ- ಕರ್ನಾಟಕ ಸೆಲ್‌ನ ಪ್ರಥಮ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನ. 14ರಂದು ನಡೆದಿದೆ.  ಇಲ್ಲಿನ ಬಿಲ್ಲವ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಂಬೈ ಸಾಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಸಫಲ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.

    ಪ್ರೇಮಾನಂದ ಬಿಜೈ ಅವರಿಗೆ ಸನ್ಮಾನ

    ಮಂಗಳೂರು ಸಮೀಪದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೂಲ ನಾಗಬನ  ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಾಗಬನದ ವಿನ್ಯಾಸಕಾರ ಶ್ರೀ ಪ್ರೇಮಾನಂದ ಬಿಜೈ ಇವರನ್ನು ದೇಗುಲದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂಜಿನಿಯರ್‌ ಆಗಿರುವ ಇವರು ಸಫಲ ಸೌಹಾರ್ದ ಸಹಕಾರಿ ನಿಯಮಿತ ಇದರ ಉಪಾಧ್ಯಕ್ಷರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರು ಕೂಡ ಆಗಿರುತ್ತಾರೆ.

    ಮುಂಬೈ ಸಾಫಲ್ಯ ಸೇವಾಸಂಘದ ಅಧ್ಯಕ್ಷ ಶ್ರೀನಿವಾಸ ಸಫಲ್ಯರಿಗೆ ಸನ್ಮಾನ

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ

    ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!