Saturday, September 21, 2024
spot_img
More

    Latest Posts

    ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವರ ದರ್ಶನ ಪಡೆದರು ಸಚಿವ ಶಂಕರ ಪಾಟೀಲ ಮುನೇನಕೊಪ್ಪ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನಕ್ಕೆ ಜವಳಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಅವರು ಕುಟುಂಬಸಮೇತರಾಗಿ ಆಗಮಿಸಿ, ದರ್ಶನ ಪಡೆದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಪ್ತರು, ಹಾಗೂ ಗಾಣಿಗ ಸಮಾಜದ ಮುಖಂಡರೂ ಆಗಿರುವ ಹುಬ್ಬಳ್ಳಿಯ ಮಂಜುನಾಥ ಆರ್.‌ ಉಡುಪಿ ಅವರು ಬಾರ್ಕೂರು ದೇವಸ್ಥಾನದ ಕುರಿತು ಶಂಕರ ಪಾಟೀಲ್‌ ಮುನೇನಕೊಪ್ಪ ಅವರಿಗೆ ತಿಳಿಸಿದ್ದು, ಆ ಮೇರೆಗೆ ಸಚಿವರು ಹೊಸ ವರ್ಷದ ಮೊದಲನೇ ದಿನವಾದ ಜನವರಿ 1ರಂದು ದೇವಸ್ಥಾನಕ್ಕೆ ಭೇಟಿ ಶ್ರೀವೇಣುಗೋಪಾಲಕೃಷ್ಣ ದೇವರ ದರ್ಶನವನ್ನು ಪಡೆದರು.

    ಬಾರ್ಕೂರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ ಸಚಿವ ದಂಪತಿ

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ರಿ. ಮೂಡುಕೇರಿ ಬಾರ್ಕೂರು ವತಿಯಿಂದ ಈ ಸಂದರ್ಭದಲ್ಲಿ ಸಚಿವ ದಂಪತಿಯನ್ನು  ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ ಬಾರ್ಕೂರು ಕ್ಷೇತ್ರದ ಹಿರಿಮೆ, ರಾಜರ ಕಾಲದ ಹಿನ್ನೆಲೆ, ದೇಗುಲದ ವಿಶೇಷತೆ ಹಾಗೂ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ವಿಶೇಷತೆಗಳನ್ನು ಸಚಿವರಿಗೆ ತಿಳಿಸಲಾಯಿತು. ಅಲ್ಲದೆ ಸಮಾಜಕ್ಕೆ ಸರ್ಕಾರ ಮತ್ತು ಇಲಾಖೆಯಿಂದ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸುವಂತೆ ಕೋರಲಾಯಿತು.

    ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ಜೊತೆ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಅಧ್ಯಕ್ಷ ವಾಸುದೇವ ಬೈಕಾಡಿ ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಅನ್ನಪೂರ್ಣೇಶ್ವರಿ ಮಹಿಳಾ ಸಂಘಟನೆ ಹಾಗೂ ಎಲ್ಲಾ ವಲಯ ಸಂಘಟನೆಗಳು, ಸಹಸಂಘಟನೆಗಳ ಪ್ರಮುಖರು, ಸಮಾಜದ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಸಚಿವ ದಂಪತಿ ಜೊತೆ ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಪದಾಧಿಕಾರಿಗಳು

    ಸಂಬಂಧಿತ ಸುದ್ದಿ: ಬಾರ್ಕೂರು ದೇವಳದಲ್ಲಿ ಸಂಭ್ರಮದ ದೀಪೋತ್ಸವ, ಹಾರಾಡಿ ರಾಮ ಗಾಣಿಗ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ..

    ಸಂಬಂಧಿತ ಸುದ್ದಿ: ಹೊಸ ವರ್ಷದಲ್ಲಿ ಹೊಸ ಹರ್ಷದೊಂದಿಗೆ ಗಾಣಿಗ ಯುವ ಬಳಗದ ವಿಧ್ಯುಕ್ತ ಉದ್ಘಾಟನೆ

    ಸಂಬಂಧಿತ ಸುದ್ದಿ: ನಿಲುಗಡೆ-ಸಂಚಾರ ಸಮಸ್ಯೆ ಬಗ್ಗೆ ಪೊಲೀಸರ ಗಮನ ಸೆಳೆದ ಚಾಮರಾಜಪೇಟೆ ನಿವಾಸಿಗರ ಕ್ಷೇಮಾಭಿವೃದ್ಧಿ ಸಂಘ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!