Saturday, September 21, 2024
spot_img
More

    Latest Posts

    ಕಾರು ಭೀಕರ ಅಪಘಾತ; ಒಟ್ಟು ಒಂದೇ ಕುಟುಂಬದ ನಾಲ್ವರ ಮರಣ: ಗಾಯಗೊಂಡಿದ್ದವರ ಪೈಕಿ ಒಬ್ಬರ ಸಾವು

    ಬೆಂಗಳೂರು: ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವಿಗೀಡಾದ ಪ್ರಕರಣದಲ್ಲಿ ಗಾಯಗೊಂಡಿದ್ದವರ ಪೈಕಿ ಒಬ್ಬರು ಮೃತಪಟ್ಟಿದ್ದಾರೆ. ಈ ಮೂಲಕ ಒಂದೇ ಕುಟುಂಬದ ನಾಲ್ವರು ಈ ಅಪಘಾತದಲ್ಲಿ ಮರಣಕ್ಕೀಡಾದಂತಾಗಿದೆ.

    ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿ ಫೆ.6ರ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಧೃತಿ (5), ಆಕೆಯ ತಾಯಿ ಗೀತಾ (30) ಹಾಗೂ ಗೀತಾ ಅತ್ತೆ ಶಾರದಮ್ಮ (60) ಸ್ಥಳದಲ್ಲೇ ಸಾವಿಗೀಡಾಗಿದ್ದರು.

    ಧೃತಿ, ಗೀತಾ, ನಾಗೇಶ

    ಇನ್ನು ಸಂಬಂಧಿಕರಾದ ಸುಧೀಂದ್ರ (36), ದಯಾನಂದ (66), ನಾಗೇಶ (60) ಅವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಾಯಾಳುಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ನಾಗೇಶ ಗಾಣಿಗ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

    ಮೃತಪಟ್ಟವರು ಹಾಗೂ ಗಾಯಾಳುಗಳು ಕುಂದಾಪುರ ಮೂಲದವರು. ಗಾಣಿಗ ಸಮಾಜದವರಾದ ಇವರು ಭಾನುವಾರ ತಡರಾತ್ರಿ ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿತ್ತು.

    ಕುಂದಾಪುರದ ಕೋಟೇಶ್ವರದವರಾದ ಇವರು ಬೆಂಗಳೂರಿನ ಕುರುಬರಹಳ್ಳಿಯಲ್ಲಿ ವಾಸವಿದ್ದರು. ನಾಗೇಶ ಅವರು ಅಡುಗೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಸೇವೆ 12 ಜಿಲ್ಲೆಗಳಿಗೆ ವಿಸ್ತರಣೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!