Sunday, September 22, 2024
spot_img
More

    Latest Posts

    ಕಷ್ಟದಲ್ಲಿರುವ ಮಹಿಳೆಯರಿಗೆ ಸಹಾಯ ಮಾಡಿದಾಗ ಮಾತ್ರ ಮಹಿಳಾ ಸಂಘದ ಬೆಳವಣಿಗೆ

    ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಕಾಡಸಿದ್ಧೇಶ್ವರ ಮಹಿಳಾ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಕಾಡಸಿದ್ಧೇಶ್ವರ ಕಲ್ಯಾಣಮಂಟಪದಲ್ಲಿ ನಡೆದಿದ್ದು, ಇದರಲ್ಲಿ ಜಮಖಂಡಿ ವಿಧಾನಸಭಾ ಕ್ಷೇತ್ರದ ಶಾಸಕ ಆನಂದ ಸಿದ್ದು ನ್ಯಾಮಗೌಡ ಅವರ ಧರ್ಮಪತ್ನಿ ಅಶ್ವಿನಿ ಆನಂದ ನ್ಯಾಮಗೌಡ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

    ಈ ಸಂದರ್ಭದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಸಂಘವನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಿಳಾ ಸ್ವಸಹಾಯ ಸಂಘವು ಕಷ್ಟದಲ್ಲಿ ಇದ್ದ ಇತರ ಮಹಿಳೆಯರಿಗೆ ಸಹಾಯ ಮಾಡಿದರೆ ಮಾತ್ರ ಸಂಘ ಬೆಳೆಯಲು ಸಾಧ್ಯ ಎಂದು ಕಿವಿಮಾತು ಹೇಳಿದರು. ಮಹಿಳೆ ಎಲ್ಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಾಳೆ. ಮಹಿಳೆಯರು ಆರ್ಥಿಕ ಸಬಲತೆ ಹೊಂದಬೇಕಾದರೆ ಸಂಘಟನೆಗಳ ಅಗತ್ಯ ಎಂದು ಅವರು ಅಭಿಪ್ರಾಯ ಪಟ್ಟರು.

    ಶಾಸಕರ ಪತ್ನಿ ಅಶ್ವಿನಿ ಆನಂದ ನ್ಯಾಮಗೌಡ ಅವರಿಂದ ಕಾರ್ಯಕ್ರಮ ಉದ್ಘಾಟನೆ

    ಸ್ವಸಹಾಯ ಸಂಘದಿಂದ ಮಹಿಳೆಯರು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಿ ಮುಂದೆ ಬರಬೇಕಾಗಿದೆ. ಅದಕ್ಕಾಗಿ ನಮ್ಮ ಇಲಾಖೆಯಿಂದ ಮಹಿಳಾ ಸಂಘದವರಿಗೆ ತರಬೇತಿ ನೀಡಲಾಗುತ್ತದೆ ಮತ್ತು ಸಹಾಯ-ಸಹಕಾರ ನೀಡಲಾಗುವುದು ಎಂದು ಸಿಡಿಪಿಒ ಅಧಿಕಾರಿ ಅನುರಾಧಾ ಹಾದಿಮನಿ ತಿಳಿಸಿದರು.

    ಕಾಡಸಿದ್ಧೇಶ್ವರ ಮಹಿಳಾ ಸಂಘದ ಅಧ್ಯಕ್ಷೆ ದೀಪಾ ತಿಪ್ಪಣ್ಣವರ, ಬಾಗಲಕೋಟೆ ಜಿಲ್ಲಾ ಗಾಣಿಗ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಎಳ್ಳೆಮ್ಮಿ, ಬಾಗಲಕೋಟೆ ಜಿಲ್ಲಾ ಗಾಣಿಗ ಸಮಾಜದ ಮಹಿಳಾ ಘಟಕದ ಕಾರ್ಯದರ್ಶಿ ವಿದ್ಯಾ ಭಾವಿ, ಬೆಳಗಾವಿ ಜಿಲ್ಲಾ ಗಾಣಿಗ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಗಾಣಿಗೇರ ಮುಂತಾದವರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಮಹಾರಾಷ್ಟ್ರದ ಕ್ರಿಕೆಟ್ ಕ್ಷೇತ್ರದಲ್ಲಿ ‘ಯಶಸ್’ ಸಾಧಿಸುತ್ತಿರುವ ‘ಗಾಣಿಗ ಬ್ರಿಲಿಯಂಟ್’

    ಸಂಬಂಧಿತ ಸುದ್ದಿ: ಅಂತಾರಾಷ್ಟ್ರೀಯ ಸೈಕ್ಲಿಂಗ್ ಸಾಧಕ ರಾಜು ಭಾಟಿಗೆ ಏಕಲವ್ಯ ಪ್ರಶಸ್ತಿ ಪ್ರದಾನ

    ಸಂಬಂಧಿತ ಸುದ್ದಿ:ಭಳಿರೆ ‘ಬಾಲರ್ಕ’.. ಇದು ಬಲಾಢ್ಯ ಭಾರತೀಯನ ಗರಡಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!