Saturday, September 21, 2024
spot_img
More

    Latest Posts

    ಶ್ರೀ ಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ನಿಂದ ಜಿಲ್ಲಾ ಸಮನ್ವಯ ಸಭೆ

    ಬೆಂಗಳೂರು: ಗಾಣಿಗ ಸಮುದಾಯದ ಮಕ್ಕಳಿಗೆ ಶೈಕ್ಷಣಿಕವಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಶ್ರೀ ಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ತನ್ನ ಸಹಾಯ ಹಾಗೂ ಕಾರ್ಯವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಜಿಲ್ಲಾ ಸಮನ್ವಯ ಸಭೆ ನಡೆಸಿದೆ.

    ಶ್ರೀ ಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ನ ಸಂಸ್ಥಾಪಕ ಅಧ್ಯಕ್ಷ ಹಾಗೂ ನಿವೃತ್ತ ಕೆಎಎಸ್‌ ಅಧಿಕಾರಿ ಆರ್. ನಾಗರಾಜ ಶೆಟ್ಟಿ ಅವರು ಇತ್ತೀಚೆಗೆ ದಕ್ಷಿಣಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಸಮನ್ವಯ ಸಭೆ ನಡೆಸಿದರು.

    ಉತ್ತರಕನ್ನಡ ಜಿಲ್ಲೆಯಲ್ಲಿ ಈ ಸಭೆ ಏ. 15ರಂದು ಅಲ್ಲಿನ ಜಿಲ್ಲಾ ಗಾಣಿಗರ ಸಮುದಾಯ ಭವನದಲ್ಲಿ ನಡೆದಿದ್ದು, ಉತ್ತರಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ, ಶಾಸಕ ಕೆ.ದಿನಕರ ಶೆಟ್ಟಿ ಅವರ ಸಹೋದರ ಕೆ. ದಾಮೋದರ ಶೆಟ್ಟಿ ಅವರ ಅಧ್ಯಕ್ಷತೆ ವಹಿಸಿದ್ದರು. ಮುಂದೆ ಕುಮಟಾದಲ್ಲಿ ಶ್ರೀ ಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಕೌಶಲ ಅಭಿವೃದ್ಧಿ ಸಂಸ್ಥೆ ಸ್ಥಾಪಿಸುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಮಾತುಕತೆ ನಡೆಸಲಾಯಿತು. ಈ ಸಂದರ್ಭದಲ್ಲಿ ಆನಂದ ನರಸಿಂಹ ಕೆಕ್ಕಾರು ಮತ್ತು ಗಾಣಿಗ ಸಮಾಜದ ಹಲವರು ಭಾಗಿಯಾಗಿದ್ದರು ಎಂದು ಆರ್.ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ಉತ್ತರಕನ್ನಡ ಜಿಲ್ಲಾ ಸಮನ್ವಯ ಸಭೆಯಲ್ಲಿ ದಾಮೋದರ ಶೆಟ್ಟಿ ಅವರಿಂದ ಮಾತು

    ಇನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶ್ರೀ ಗಾಣಿಗ ಎಜುಕೇಷನ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ಏ. 17ರಂದು ಸಮನ್ವಯ ಸಭೆ ನಡೆಸಿದ್ದು, ದಕ್ಷಿಣಕನ್ನಡ ಜಿಲ್ಲಾ ಗಾಣಿಗರ ಯಾನೆ ಸಫಲಿಗರ ಸಂಘದ ಅಧ್ಯಕ್ಷ ತಾರಾನಾಥ ಸುವರ್ಣ ಅವರು ಅಧ್ಯಕ್ಷತೆ ವಹಿಸಿದ್ದರು. ದ ಕರಾವಳಿ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿ ಮತ್ತು ಬ್ಯಾರಿಸ್ಟರ್‌ ಯೆಲ್ಲಪ್ಪ ಟ್ರಸ್ಟ್‌ ಪದಾಧಿಕಾರಿಗಳು ಕೂಡ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಮುಂದಿನ ಕಾರ್ಯಕ್ರಮಗಳ ಕುರಿತು ಈ ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಎಂದು ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯಲ್ಲಿನ ಸಮನ್ವಯ ಸಭೆಯಲ್ಲಿ ಸಮಾಲೋಚನೆ

    ಸಂಬಂಧಿತ ಸುದ್ದಿ: ಗಾಣಿಗ ಸಮುದಾಯ ಅತಿ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಲಿ: ಬಿಹಾರ ಸಂಸದ ಪಿಂಟು

    ಸಂಬಂಧಿತ ಸುದ್ದಿ: ಆ ದಿನಗಳ ʼಗಾಣಿಗರ ಬಂಧುʼ..!

    ಸಂಬಂಧಿತ ಸುದ್ದಿ: ಯುವ ಮಾನಸ ಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ವಿಧ್ಯುಕ್ತ ಉದ್ಘಾಟನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!