Saturday, September 21, 2024
spot_img
More

    Latest Posts

    ಎಮ್‌ಟೆಕ್‌ನಲ್ಲಿ ರಾಜ್ಯಕ್ಕೇ ಟಾಪರ್‌ ಆಗಿ ಚಿನ್ನದ ಪದಕ ಗಳಿಸಿದ ನಂದಿನಿ

    ಬೆಂಗಳೂರು: ಅವಿಭಜಿತ ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನ ವಿ. ನಂದಿನಿ ಎಮ್‌ಟೆಕ್‌ನ ಡೈರಿ ಸೈನ್ಸ್‌ ವಿಭಾಗದಲ್ಲಿ ರಾಜ್ಯಕ್ಕೇ ಟಾಪರ್‌ ಆಗಿ, ಚಿನ್ನದ ಪದಕಕ್ಕೂ ಪಾತ್ರರಾಗಿದ್ದಾರೆ.

    ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಲ್ಲಿ ಏ. 28ರಂದು ನಡೆದ ಘಟಿಕೋತ್ಸವದಲ್ಲಿ ರಾಜ್ಯಪಾಲ ಹಾಗೂ ಕುಲಾಧಿಪತಿಗಳೂ ಆಗಿರುವ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಂದ ಚಿನ್ನದ ಪದಕ ಹಾಗೂ ಪ್ರಮಾಣಪತ್ರವನ್ನು ನಂದಿನಿ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್‌ ಮತ್ತಿತರರ ಗಣ್ಯರೂ ಉಪಸ್ಥಿತರಿದ್ದರು.

    ನಂದಿನಿ ಕೆಜಿಎಫ್‌ ತಾಲೂಕಿನ ವೆಂಗಸಂದ್ರ ಗ್ರಾಮದ ಸಿ. ವೆಂಕಟಾಚಲಪತಿ ಅವರ ಪುತ್ರಿ. ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಪಾತ್ರರಾಗಿರುವ ನಂದಿನಿಗೆ ಕಾಲೇಜು ಮುಖ್ಯಸ್ಥರು, ಉಪನ್ಯಾಸಕರು, ಸಹಪಾಠಿಗಳು, ವಿವಿಧ ಕ್ಷೇತ್ರದ ಗಣ್ಯರು, ಬಂಧು-ಮಿತ್ರರು ಸೇರಿದಂತೆ ಗ್ರಾಮಸ್ಥರೂ ಶುಭಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಸಾಧನೆ ನಮ್ಮ ಸಮುದಾಯಕ್ಕೂ ಹೆಮ್ಮೆಯ ಸಂಗತಿ ಎಂದು ಗಾಣಿಗ ಸಮಾಜದ ಹಿರಿಯರು, ಮುಖಂಡರೂ ಸಂತಸ ವ್ಯಕ್ತಪಡಿಸಿದ್ದಾರೆ.

    ಚಿನ್ನದ ಪದಕ ಪುರಸ್ಕೃತ ನಂದಿನಿ
    ಪದಕ ಪುರಸ್ಕೃತ ಇತರ ಪ್ರತಿಭಾವಂತರ ಜೊತೆ ನಂದಿನಿ
    ತಂದೆಯೊಂದಿಗೆ ನಂದಿನಿ

    ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?

    ಸಂಬಂಧಿತ ಸುದ್ದಿ: ಯುವ ಮಾನಸ ಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ವಿಧ್ಯುಕ್ತ ಉದ್ಘಾಟನೆ

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!