Saturday, September 21, 2024
spot_img
More

    Latest Posts

    ಗಾಯತ್ರಿದೇವಿ ದೇವಳದಲ್ಲಿ ನಾಗದೇವರ ಪ್ರತಿಷ್ಠೆ, ಆಶ್ಲೇಷಾ ಬಲಿ…

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡಬೆಟ್ಟು ಗ್ರಾಮದ ಪಿಲಿಂಗಾಲು ಶ್ರೀ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಪುನರ್ ನಿರ್ಮಾಣಗೊಂಡ ನಾಗನಕಟ್ಟೆಯಲ್ಲಿ ನಾಗದೇವರ ಪ್ರತಿಷ್ಠೆ ಮತ್ತು ಆಶ್ಲೇಷಾ ಬಲಿ ಪೂಜೆ ಇತ್ತೀಚೆಗೆ ನಡೆಯಿತು.

    ಗಾಣಿಗ ಸಮಾಜದ ಆಧ್ಯಾತ್ಮಿಕ ಸಾಧಕ, ದೇವಸ್ಥಾನದ ಆಡಳಿತ ಧರ್ಮದರ್ಶಿ ಕೆ.ಎಸ್. ಪಂಡಿತ್ ಅವರ ಮಾರ್ಗದರ್ಶನ,  ವೇದಮೂರ್ತಿ ಲಕ್ಷ್ಮೀಕಾಂತ ಆಚಾರ್ಯ ಮತ್ತು ಪ್ರಧಾನ ಅರ್ಚಕ ನಾರಾಯಣ ತಿಬರಾಯ ನೇತೃತ್ವದಲ್ಲಿ ಧಾರ್ಮಿಕ ವಿಧಿ-ವಿಧಾನಗಳು ನೆರವೇರಿದವು.

    ನಾಗದೇವರ ಪ್ರತಿಷ್ಠಾ ಮಹೋತ್ಸವ, ಆಶ್ಲೇಷಾ ಬಲಿ, ಪ್ರತಿಷ್ಠಾ ಹೋಮ, ನವ ಕಲಶ, ನಾಗತಂಬಿಲ ಮುಂತಾದ ಸೇವೆಯನ್ನು ನೆರವೇರಿಸಲಾಯಿತು.

    ಪರಶುರಾಮ ಋಷಿ ತಪಸ್ಸು ಮಾಡಿದ ತಾಣ ಎನ್ನಲಾಗಿರುವ ಗಾಯತ್ರಿ ದೇವಿ ದೇವಸ್ಥಾನದಲ್ಲಿ ಇದೇ ಸಂದರ್ಭದಲ್ಲಿ ದೇವರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

    ಕ್ಷೇತ್ರದ ಆಡಳಿತ ಧರ್ಮದರ್ಶಿ, ಗಾಣಿಗ ಸಮಾಜದ ಆಧ್ಯಾತ್ಮಿಕ ಸಾಧಕ ಕೆ.ಎಸ್.ಪಂಡಿತ್, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಬೂಬ ಸಪಲ್ಯ ಮುಂಡಬೈಲು, ಸೇವಾರ್ಥಿ ಕವಿತಾ ಮೋಹನ್ ಕುಮಾರ್ ಬೆಂಗಳೂರು, ಬಂಟ್ವಾಳ ಪುರಸಭೆ ಮಾಜಿ ಸದಸ್ಯ ಜಗದೀಶ ಕುಂದರ್, ಉದ್ಯಮಿ ನವೀನ್ ಕೋಟ್ಯಾನ್ ಬಿ.ಸಿ.ರೋಡು, ಪತ್ರಕರ್ತ ಮೋಹನ್ ಕೆ. ಶ್ರೀಯಾನ್ ರಾಯಿ ಮತ್ತಿತರರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಸಂಕಷ್ಟದಲ್ಲಿರುವವರ ಮನೆಗೆ ಗಾಣಿಗ ಸಮಾಜದ ಮುಖಂಡರ ಭೇಟಿ, ನೆರವಿನ ಅಭಯ..

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ

    ಸಂಬಂಧಿತ ಸುದ್ದಿ: ಗಾಣಿಗ ಸಮುದಾಯ ಹಾಗೂ ಗ್ರಾಮಸ್ಥರಿಂದ ಶುಕ್ರವಾರ ಶ್ರೀಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!