Friday, May 17, 2024
spot_img
More

    Latest Posts

    ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರ ಜನ್ಮದಿನಾಚರಣೆಯಲ್ಲಿ ಗಾಣಿಗ ಯುವ ಬಳಗದ ಸಂಭ್ರಮ

    ಬೆಂಗಳೂರು: ಗಾಣಿಗ ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಸಮುದಾಯಕ್ಕೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಕುಮಟಾ ಗಾಣಿಗ ಯುವಬಳಗವು ಸಮಾಜದವರೇ ಆಗಿರುವ ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರ ಜನ್ಮದಿನಾಚರಣೆಯ ಸಂಭ್ರಮದಲ್ಲಿ ಭಾಗಿಯಾಗಿದೆ.

    ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಮೋಹನ ಶೆಟ್ಟಿ ಅವರ ಜನ್ಮದಿನವನ್ನು ನಿನ್ನೆ ಕುಮಟಾ ಗಾಣಿಗ ಯುವ ಬಳಗದ ವತಿಯಿಂದ ಆಚರಿಸಲಾಯಿತು. ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಲ್ಲದೆ, ಭವಿಷ್ಯದ ದಿನಗಳಲ್ಲೂ ಒಳಿತಾಗಲೆಂದು ಶುಭ ಹಾರೈಸಲಾಯಿತು.

    ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಮೋಹನ್‌ ಶೆಟ್ಟಿ

    ಯುವ ಬಳಗದ ವತಿಯಿಂದ ನಡೆಯುತ್ತಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ ಶಾರದಾ ಮೋಹನ್‌ ಶೆಟ್ಟಿಯವರು, ಯುವ ಬಳಗದ ನಿಧಿಗೆ ಹೆಚ್ಚಿನ ಸಹಕಾರ ನೀಡಿ ಪ್ರೋತ್ಸಾಹಿಸಿದ್ದಾರೆ. ಈ ಸಂದರ್ಭದಲ್ಲಿ ಬಳಗದ ಪದಾಧಿಕಾರಿಗಳು, ಬಳಗದ ಪ್ರೋತ್ಸಾಹಕರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

    ಶಾಸಕಿ ಶಾರದಾ ಅವರ ಜನ್ಮದಿನದ ಸಂಭ್ರಮದಲ್ಲಿ ಭಾಗಿಯಾದ ಗಾಣಿಗ ಯುವ ಬಳಗ

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ ಅವರಿಂದ ಗಾಣಿಗ ಮಹಾಸಭಾದ ದಿನದರ್ಶಿಕೆ ಬಿಡುಗಡೆ

    ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸಲಹೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!