Saturday, September 21, 2024
spot_img
More

    Latest Posts

    ಅಖಿಲ ಕರ್ನಾಟಕ ಗಾಣಿಗ ಸಂಘದ ನಿರ್ದೇಶಕರಾಗಿ ಭಾಸ್ಕರ್ ಎಸ್. ಎಡಪದವು ಅವಿರೋಧ ಆಯ್ಕೆ

    ಬೆಂಗಳೂರು: ಅಖಿಲ ಕರ್ನಾಟಕ ಗಾಣಿಗ ಸಂಘ ಬೆಂಗಳೂರು ಇದರ ನಿರ್ದೇಶಕರಾಗಿ ಭಾಸ್ಕರ್ ಎಸ್. ಎಡಪದವು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

    ಮಾಜಿ ಸಚಿವರು, ಪ್ರಸ್ತುತ ಸನ್ಯಾಸತ್ವ ಸ್ವೀಕರಿಸಿರುವ ಬಿ.ಜೆ.ಪುಟ್ಟಸ್ವಾಮಿ ಅವರ ಆಧೀನದಲ್ಲಿ ನಡೆಯುತ್ತಿರುವ ಈ ಸಂಘಕ್ಕೆ ದಕ್ಷಿಣಕನ್ನಡ ಜಿಲ್ಲೆಯಿಂದ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಭಾಸ್ಕರ್ ಅವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ.

    ದಕ್ಷಿಣಕನ್ನಡ ಜಿಲ್ಲೆಯ ಗಾಣಿಗ ಸಮಾಜದ ಸೇವೆಯಲ್ಲಿ ನಿರತರಾಗಿರುವ ಭಾಸ್ಕರ್ ಎಸ್. ಎಡಪದವು ಮತ್ತು ಇವರ ಸಹೋದರ ಚಂದ್ರಶೇಖರ್ ಎಸ್. ಎಡಪದವು ಅವರು ಜಿಲ್ಲಾ ಮತ್ತು ತಾಲೂಕು ಮಟ್ಟದ ಗಾಣಿಗ ಸಂಘಗಳಲ್ಲಿ ವಿವಿಧ ಸ್ಥರಗಳಲ್ಲಿ ಸೇವಾ ಮನೋಭಾವದಿಂದ ಕೆಲಸ ಮಾಡಿ ಸಮಾಜದ ಪ್ರೀತಿಗೆ ಪಾತ್ರರಾಗಿರುತ್ತಾರೆ. ಭಾರತೀಯ ಜೀವವಿಮಾ ನಿಗಮದ ನಿವೃತ್ತ ನೌಕರರಾದ ಭಾಸ್ಕರ್ ಅವರು ಸಫಲ ನಿಯತಕಾಲಿಕದ ಸಂಪಾದಕರೂ ಆಗಿರುತ್ತಾರೆ.

    ಮುಂದಿನ ದಿನಗಳಲ್ಲಿ ಪೂರ್ಣ ಸಮಿತಿ ರಚನೆಯಾದಾಗ ಇವರಿಗೆ ಹೆಚ್ಚುವರಿ ಜವಾಬ್ದಾರಿ ಸಿಗುವ ಸಾಧ್ಯತೆಗಳಿವೆ. ಭಾಸ್ಕರ್ ಅವರು ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮಿಜಾರ್-ಎಡಪದವು ಗಾಣಿಗರ ಯಾನೆ ಸಫಲಿಗರ ಸಂಘದ ಅಧ್ಯಕ್ಷ, ಸಫಲ ಸೌಹಾರ್ದ ಸಹಕಾರಿ ನಿಯಮಿತದ ನಿರ್ದೇಶಕ ಮತ್ತು ಭಾರತೀಯ ಜೀವವಿಮಾ ನಿಗಮದ ನಿವೃತ್ತ ನೌಕರರ ಸಂಘದ ದಕ್ಷಿಣಕನ್ನಡ ಜಿಲ್ಲೆಯ ಪದಾಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರ ಜನ್ಮದಿನಾಚರಣೆಯಲ್ಲಿ ಗಾಣಿಗ ಯುವ ಬಳಗದ ಸಂಭ್ರಮ

    ಸಂಬಂಧಿತ ಸುದ್ದಿ: ಬೆಂಗಳೂರು ನಗರ ಜಿಲ್ಲೆ ಸ್ಪೆಷಲ್‌ ಡೆಪ್ಯುಟಿ ಕಮಿಷನರ್‌ ಆಗಿ ಡಾ. ವಾಸಂತಿ ಅಮರ್‌ ನೇಮಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!