Friday, May 17, 2024
spot_img
More

    Latest Posts

    ಆಸ್ಪತ್ರೆಗೆ ಧಾವಿಸಿ ಅಮ್ಮನ ಯೋಗಕ್ಷೇಮ ವಿಚಾರಿಸಿದ್ರು ಪ್ರಧಾನಿ ಮೋದಿ

    ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಮತ್ತು ಕುಟುಂಬಸ್ಥರು ನಿನ್ನೆ ಅಪಘಾತಕ್ಕೆ ಒಳಗಾಗಿ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವಾಗಲೇ ಅತ್ತ ಅವರ ತಾಯಿ ಹೀರಾಬೆನ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

    ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಯು.ಎನ್. ಮೆಹ್ತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಅಲ್ಲಿನ ಸರ್ಕಾರ ವಿಶೇಷ ಮುತುವರ್ಜಿ ವಹಿಸಿ ಚಿಕಿತ್ಸೆ ಒದಗಿಸುತ್ತಿದೆ. ಸಂಭಾವ್ಯ ಜನಜಂಗುಳಿಯನ್ನು ನಿಯಂತ್ರಿಸಲು ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ಕೂಡ ವಹಿಸಲಾಗಿದೆ.

    ತಾಯಿಯ ಯೋಗಕ್ಷೇಮ ವಿಚಾರಿಸಲು ಪ್ರಧಾನಿ ಮೋದಿ ಆಸ್ಪತ್ರೆಗೆ ಧಾವಿಸಿದ್ದಾರೆ. ಹೀರಾಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ಅಭಯ ನೀಡಿದ್ದಾರೆ. ಈ ಮಧ್ಯೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿ ವಿವಿಧ ಪಕ್ಷಗಳ ಅನೇಕ ನಾಯಕರು ಪ್ರಧಾನಿಯವರ ತಾಯಿ ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿ ಶುಭ ಕೋರಿದ್ದಾರೆ.

    ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಜನವರಿಯಲ್ಲಿ ನಡೆಯಲಿದೆ ಬೃಹತ್‌ ಗಾಣಿಗ ಸಮಾವೇಶ; ಬೇಡಿಕೆಗಳ ಕುರಿತು ನಡೆಯಿತು ಪೂರ್ವಭಾವಿ ಸಭೆ


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!