Saturday, September 21, 2024
spot_img
More

    Latest Posts

    ಶ್ರೀಗಾಯತ್ರಿದೇವಿ ದೇವಸ್ಥಾನಕ್ಕೆ ಮಾಜಿ ಸಚಿವರ ಭೇಟಿ, ನೆರವಿನ ಭರವಸೆ

    ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಎಂಬಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ಶ್ರೀ ಗಾಯತ್ರಿದೇವಿ ದೇವಸ್ಥಾನಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಶುಕ್ರವಾರ ಭೇಟಿ ನೀಡಿ ಜೀರ್ಣೋದ್ಧಾರ ಕಾಮಗಾರಿ ವೀಕ್ಷಿಸಿದರು. ಈ ಕ್ಷೇತ್ರದಲ್ಲಿ ಫೆ.8ರಿಂದ 10ರತನಕ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ನೆರವು ನೀಡುವುದಾಗಿಯೂ ಅವರು ತಿಳಿಸಿದರು.

    ಕ್ಷೇತ್ರದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್ ಮಾತನಾಡಿ, ಕಳೆದ 2006ರಲ್ಲಿ ಕೇವಲ ಗರ್ಭಗುಡಿ ನಿರ್ಮಿಸಿ ದೇವರ ವಿಗ್ರಹ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ನಡೆಸಲಾಗಿದೆ. ಇದೀಗ ಸುತ್ತುಗೋಪುರ ಸಹಿತ ಗಣಪತಿ ಗುಡಿ, ಗುರು ರಾಘವೇಂದ್ರ ಸ್ವಾಮಿ ಗುಡಿ ಮತ್ತು ಪರಿವಾರ ದೈವಗಳಿಗೆ ಗುಡಿ ನಿರ್ಮಿಸಲಾಗಿದೆ ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಜನಿ ಬಾಬು ಕುಲಾಲ್ ಮಾತನಾಡಿ, ಗ್ರಾಮ ಪಂಚಾಯಿತಿ ವತಿಯಿಂದ ಸುಸಜ್ಜಿತ ಶೌಚಾಲಯ ನಿರ್ಮಾಣಗೊಳ್ಳುತ್ತಿದೆ ಎಂದರು.

    ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್, ಹೊರೆಕಾಣಿಕೆ ಸಮಿತಿ ಅಧ್ಯಕ್ಷ ವೀರೇಂದ್ರ ಅಮೀನ್, ಪ್ರಮುಖರಾದ ಬೇಬಿ ಕುಂದರ್, ಕರ್ಣ ಚಂದ್ರಶೇಖರ್, ಪ್ರಭಾಕರ ಪೂಜಾರಿ, ಅಭಿಷೇಕ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಂದ ಶ್ರೀಗಾಯತ್ರಿದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

    ಸಂಬಂಧಿತ ಸುದ್ದಿ: ಗಾಣಿಗ ಮಹಾಸಭಾದ ಸಮಾರಂಭದಲ್ಲಿ ಮೊಳಗಿತು ಒಗ್ಗಟ್ಟಿನ ಮಂತ್ರ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!