Friday, May 17, 2024
spot_img
More

    Latest Posts

    ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ

    ಬೆಂಗಳೂರು: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಮೂಲಕ ಗಾಣಿಗ ಸಮಾಜದ ಬಹುಕಾಲದ ಬೇಡಿಕೆಯನ್ನು ಡಬಲ್‌ ಇಂಜಿನ್‌ ಸರ್ಕಾರ ಈಡೇರಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಗಾಣಿಗ ಸಮುದಾಯದ ಸಂಘ-ಸಂಸ್ಥೆಗಳು ಸಂಭ್ರಮಾಚರಣೆ ನಡೆಸಿವೆ. ಮಾತ್ರವಲ್ಲ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಧನ್ಯವಾದಗಳನ್ನು ಕೂಡ ಸಲ್ಲಿಸಲಾಗಿದೆ.

    ಶ್ರೀತೈಲೇಶ್ವರ ಗಾಣಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಭೇಟಿಯಾಗಿ, ನಿಗಮ ಸ್ಥಾಪನೆ ಹಿನ್ನೆಲೆಯಲ್ಲಿ ಧನ್ಯವಾದಗಳನ್ನು ತಿಳಿಸಿದರು.

    ಶ್ರೀತೈಲೇಶ್ವರ ಗಾಣಿಗ ಸಂಸ್ಥಾನದ ಶ್ರೀಪೂರ್ಣಾನಂದಪುರಿ ಸ್ವಾಮೀಜಿಯವರಿಂದ ಮುಖ್ಯಮಂತ್ರಿಯವರಿಗೆ ಧನ್ಯವಾದ ಅರ್ಪಣೆ
    ಶ್ರೀತೈಲೇಶ್ವರ ಗಾಣಿಗ ಸಂಸ್ಥಾನದ ಶ್ರೀಪೂರ್ಣಾನಂದಪುರಿ ಸ್ವಾಮೀಜಿಯವರಿಂದ ಸಚಿವ ಡಾ.ಕೆ.ಸುಧಾಕರ್‌ಗೆ ಧನ್ಯವಾದ ಅರ್ಪಣೆ

    ಬಾಗಲಕೋಟೆ ಜಿಲ್ಲೆಯ ಮುದ್ದೇಬಿಹಾಳದ ಬಸವೇಶ್ವರ ವೃತ್ತದಲ್ಲಿ ಕೊಲ್ಹಾರ ಶ್ರೀ ದಿಗಂಬರೇಶ್ವರ ಸಂಸ್ಥಾನದ ಶ್ರೀ ಕಲ್ಲಿನಾಥ ಸ್ವಾಮೀಜಿ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗಾಣಿಗ ಸಮಾಜದ ಮುಖಂಡರಾದ ಉಮಾಪತಿ ಚೌಧರಿ, ಡಾ.ಆರ್.ಎಸ್.ಮಸೂತಿ, ಬಸವರಾಜ್‌ ಕಲ್ಲೂರ, ಬಸವರಾಜ ಸಜ್ಜನ ಮುಂತಾದವರು ಉಪಸ್ಥಿತರಿದ್ದರು.

    ಬಾಗಲಕೋಟೆ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶ್ರೀಕಲ್ಲಿನಾಥ ಸ್ವಾಮೀಜಿ ನೇತೃತ್ವದಲ್ಲಿ ಸಂಭ್ರಮಾಚರಣೆ
    ಬಾಗಲಕೋಟೆ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶ್ರೀಕಲ್ಲಿನಾಥ ಸ್ವಾಮೀಜಿ ನೇತೃತ್ವದಲ್ಲಿ ಸಂಭ್ರಮಾಚರಣೆ

    ಅಖಿಲ ಕರ್ನಾಟಕ ಗಾಣಿಗ ಸಂಘದ ಅಧ್ಯಕ್ಷ ಎಂ.ಆರ್. ರಾಜಶೇಖರ್‌ ಮತ್ತು ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಭೇಟಿಯಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ವಿ.ಮುನಿಚೆಟ್ಟಿ, ಖಜಾಂಚಿ ಎಂ.ಪಿ.ಮಂಜುನಾಥ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಅಖಿಲ ಕರ್ನಾಟಕ ಗಾಣಿಗರ ಸಂಘದಿಂದ ಮುಖ್ಯಮಂತ್ರಿಯವರಿಗೆ ಧನ್ಯವಾದ ಸಮರ್ಪಣೆ
    ಅಖಿಲ ಕರ್ನಾಟಕ ಗಾಣಿಗ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು

    ಅಖಿಲ ಕರ್ನಾಟಕ ಗಾಣಿಗ ಸಂಘದ ನಿರ್ದೇಶಕ ಹಾಗೂ ದಕ್ಷಿಣಕನ್ನಡದ ಮಿಜಾರ್‌ ಎಡಪದವು ಗಾಣಿಗರ ಯಾನೆ ಸಫಲಿಗರ ಸೇವಾ ಸಂಘದ ಅಧ್ಯಕ್ಷ ಭಾಸ್ಕರ್‌ ಎಸ್.‌ ಎಡಪದವು ಅವರು ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಬೆಂಗಳೂರಿನ ಗಾಣಿಗ ‘ಟೀಮ್‌ ಏಕತಾ’ ಸದಸ್ಯರು ಹಾಗೂ ಗ್ಲೋಬಲ್‌ ಗಾಣಿಗ.ಕಾಮ್‌ ವತಿಯಿಂದ ಜೊತೆಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಫೆ.21ರಂದು ರೇಸ್‌ಕೋರ್ಸ್‌ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಲಾಯಿತು. ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿ, ಧನ್ಯವಾದಗಳನ್ನು ಸಲ್ಲಿಸಲಾಯಿತು. ಜೊತೆಗೆ ನಿಗಮಕ್ಕೆ ಸಂಬಂಧಿಸಿದಂತೆ ಮನವಿಯನ್ನೂ ನೀಡಲಾಯಿತು. ಭಾಸ್ಕರ್‌ ಗಾಣಿಗ ಕುಂದಾಪುರ, ರಮೇಶ್‌ ಗಾಣಿಗ ಮಟಪಾಡಿ, ಜಿ.ಎಸ್. ರಮೇಶ್‌, ವಿಶ್ವನಾಥ ಭಾಸ್ಕರ್‌ ಗಾಣಿಗ, ಕಾರ್ತಿಕ್‌ ಕೋಡಿ, ಮಂಜುನಾಥ ಕಡ್ಕೆ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

    ಟೀಮ್‌ ಏಕತಾ ಮತ್ತು ಗ್ಲೋಬಲ್‌ ಗಾಣಿಗದಿಂದ ಮುಖ್ಯಮಂತ್ರಿಯವರಿಗೆ ಧನ್ಯವಾದ ಸಮರ್ಪಣೆ

    ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಗಾಣಿಗರ ಸಂಘ ಹಾಗೂ ಯುವ ಗಾಣಿಗ ಸಂಘದ ವತಿಯಿಂದ ಸಂಭ್ರಮಾಚರಣೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಮಾಲೂರು ತಾಲೂಕು ಗಾಣಿಗರ ಸಂಘದ ಅಧ್ಯಕ್ಷ ಸಂತೆಹಳ್ಳಿ ರಮೇಶ್, ಗೌರವಾಧ್ಯಕ್ಷ ಎಂ.ಜಿ.ಮಧುಸೂಧನ್, ಯುವ  ಅಧ್ಯಕ್ಷ ನಾರಾಯಣಸ್ವಾಮಿ, ಶ್ರೀನಿವಾಸ, ರವಿಕುಮಾರ್, ಸುನಿಲ್, ಮಂಜು ಮುಂತಾದವರು ಉಪಸ್ಥಿತರಿದ್ದರು.

    ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸಂಭ್ರಮಾಚರಣೆ

    ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಸ್ಥಳೀಯ ಮಾರುಕಟ್ಟೆಯ ವೀರರಾಣಿ ಕಿತ್ತೂರ ಚನ್ನಮ್ಮ ವೃತ್ತದಲ್ಲಿ ಕೂಡ ಗಾಣಿಗ ಸಮುದಾಯದವರು ನಿಗಮಕ್ಕಾಗಿ ನಡೆಸಿದ ಬಹುಕಾಲದ ಹೋರಾಟಕ್ಕೆ ಸಂದ ಜಯದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದರು.

    ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಸಂಭ್ರಮಾಚರಣೆ
    ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಸಂಭ್ರಮಾಚರಣೆ
    ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಸಂಭ್ರಮಾಚರಣೆ

    ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆ  ಮಾಡಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದ ಸೂಚಿಸಿ ನಂಜನಗೂಡು, ಜೇವರ್ಗಿ, ರಾಮನಗರದ ಹಾರೋಹಳ್ಳಿ ಸೇರಿದಂತೆ ಇನ್ನೂ ಹಲವೆಡೆ ಸಂಭ್ರಮಾಚರಣೆಗಳು ನಡೆದವು.

    ನಂಜನಗೂಡು ಗಾಣಿಗರ ಸಂಭ್ರಮಾಚರಣೆ
    ರಾಮನಗರ ಜಿಲ್ಲೆಯ ಹಾರೋಹಳ್ಳಿಯಲ್ಲಿ ಸಂಭ್ರಮಾಚರಣೆ
    ಕಲಬುರಗಿ ಜಿಲ್ಲೆಯ ಜೇವರ್ಗಿ ಮತ್ತು ಯಡ್ರಾಮಿಯಲ್ಲಿ ಸಂಭ್ರಮಾಚರಣೆ

    (ರಾಜ್ಯದ ಇತರ ಭಾಗಗಳಲ್ಲಿ ಗಾಣಿಗ ಸಂಘ-ಸಮಾಜದಿಂದ ಸಂಭ್ರಮಾಚರಣೆ ನಡೆದಿದ್ದಲ್ಲಿ ಅದರ ಫೋಟೋ-ವಿವರ [email protected] ಗೆ ಇ-ಮೇಲ್‌ ಮಾಡಿದರೆ ಪ್ರಕಟಿಸಲಾಗುವುದು)

    ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ‌ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!