Friday, May 17, 2024
spot_img
More

    Latest Posts

    ಸಿಆರ್‌ಡಬ್ಲ್ಯುಎನಿಂದ ಉಚಿತ ಆರೋಗ್ಯ ಶಿಬಿರ; 500 ಮಂದಿಗೆ ತಪಾಸಣೆ, ಸಲಹೆ

    ಬೆಂಗಳೂರು: ಚಾಮರಾಜಪೇಟೆ ರೆಸಿಡೆಂಟ್ಸ್‌ ವೆಲ್‌ಫೇರ್‌ ಅಸೋಸಿಯೇಷನ್‌ (ಸಿಆರ್‌ಡಬ್ಲ್ಯುಎ), ಅಖಿಲ ಕರ್ನಾಟಕ ಮಕ್ಕಳ ಕೂಟ, ಭಾರತೀಯ ರೆಡ್‌ಕ್ರಾಸ್ ರಕ್ತನಿಧಿ, ರೋಟರಿ ಬೆಂಗಳೂರು ಕಬ್ಬನ್ ಪಾರ್ಕ್, ಸರ್ವೋದಯ ವಾಕ್ ಹಾಗೂ ಶ್ರವಣ ವಿದ್ಯಾಲಯದ ಸಹಭಾಗಿತ್ವ ಹಾಗೂ ವಿಜಯವಾಣಿ ಪತ್ರಿಕೆ ಮತ್ತು ದಿಗ್ವಿಜಯ ಸುದ್ದಿವಾಹಿನಿ ಸಹಯೋಗದಲ್ಲಿ ಮಾ. 12ರಂದು ಮಕ್ಕಳ ಕೂಟದಲ್ಲಿ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿತ್ತು.

    ಮಕ್ಕಳಕೂಟ ಆಟದ ಮೈದಾನದ ಆವರಣದಲ್ಲಿ ರವಿವಾರ ಆಯೋಜಿಸಲಾಗಿದ್ದ ಈ ಉಚಿತ ಆರೋಗ್ಯ ಶಿಬಿರದಲ್ಲಿ ಚಾಮರಾಜಪೇಟೆ ಹಾಗೂ ಆಸುಪಾಸಿನ ಸುಮಾರು 500 ಮಂದಿ ವಿವಿಧ ರೋಗಗಳ ಬಗ್ಗೆ ತಪಾಸಣೆ ಮಾಡಿಸಿಕೊಂಡರು. ಮಧುಮೇಹ, ರಕ್ತದೊತ್ತಡ, ಹೃದ್ರೋಗ, ಇಸಿಜಿ, ಕಣ್ಣು ಮತ್ತು ಕಿವಿ ಸೇರಿ ಸಾಮಾನ್ಯ ರೋಗಗಳ ಸಂಬಂಧ ಆರೋಗ್ಯ ತಪಾಸಣೆಗೆ ಒಳಗಾದರು.

    ನಾವೆಲ್ಲ ಜೊತೆಯಾಗಿ ಆಯೋಜಿಸಿರುವ ಈ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಸುಮಾರು ಐನೂರು ಮಂದಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಮುಂದಿನ ಸಲ ಇದನ್ನು ಇನ್ನೂ ದೊಡ್ಡಮಟ್ಟದಲ್ಲಿ ಆಯೋಜಿಸುವ ಗುರಿ ಇದೆ.

    | ಬಿ.ಎಸ್.ಸುಬ್ಬಣ್ಣ, ಅಧ್ಯಕ್ಷ, ಚಾಮರಾಜಪೇಟೆ ನಿವಾಸಿಗರ ಕ್ಷೇಮಾಭಿವೃದ್ಧಿ ಸಂಘ.

    ನೂರು ಮಂದಿ ನೇತ್ರ ಚಿಕಿತ್ಸೆ ಮಾಡಿಸಿಕೊಂಡರೆ, ವಾಕ್ ಶ್ರವಣ ಮತ್ತು ಇಸಿಜಿಯಲ್ಲಿ ತಲಾ 50 ಮಂದಿ ಚಿಕಿತ್ಸೆ ಮತ್ತು ಸಲಹೆ ಪಡೆದರು. ಹದಿನೇಳು ಮಂದಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಆರೋಗ್ಯದ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದರು.

    ರೋಟರಿ ಬೆಂಗಳೂರು ಕಬ್ಬನ್‌ಪಾರ್ಕ್‌ನ ಡಾ.ಶ್ಯಾಮ್ ಸುಂದರ್‌ ಸೇರಿ ಹಲವು ವೈದ್ಯರು, ಶುಶ್ರೂಷಕರು ವೈದ್ಯಕೀಯ ಸೇವೆಯಲ್ಲಿ ಭಾಗಿಯಾಗಿದ್ದರು. ಬೆಂಗಳೂರು ಸಿಟಿ ಲಾರಿ ಟ್ರಾನ್ಸ್‌ಪೋರ್ಟ್ ಏಜೆಂಟ್ಸ್ ಅಸೋಸಿಯೇಷನ್, ಚಾಮರಾಜಪೇಟೆ ವರ್ತಕರ ಸಂಘ ಹಾಗೂ ಇತರ ಸಂಘ-ಸಂಸ್ಥೆಗಳು ಸಹಕಾರ ನೀಡಿದ್ದವು.

    ಸಂಬಂಧಿತ ಸುದ್ದಿ: ಚಾಮರಾಜಪೇಟೆ ಸಮಸ್ಯೆ ಪರಿಹಾರ; ಸಿಆರ್‌ಡಬ್ಲ್ಯುಎ ಪಾತ್ರ ಮಹತ್ತರ

    ಚಾಮರಾಜಪೇಟೆ ರೆಸಿಡೆಂಟ್ಸ್ ವೆಲ್‌ಫೇರ್‌ ಅಸೋಸಿಯೇಷನ್‌ ಗೌರವಾಧ್ಯಕ್ಷ ಡಾ.ಪ್ರಕಾಶ್‌, ಅಧ್ಯಕ್ಷ ಬಿ.ಎಸ್.ಸುಬ್ಬಣ್ಣ, ಉಪಾಧ್ಯಕ್ಷ ಡಾ. ಎನ್.ಎಸ್. ಕೃಷ್ಣಮೂರ್ತಿ ಮತ್ತಿತರರ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ನಿಲುಗಡೆ-ಸಂಚಾರ ಸಮಸ್ಯೆ ಬಗ್ಗೆ ಪೊಲೀಸರ ಗಮನ ಸೆಳೆದ ಚಾಮರಾಜಪೇಟೆ ನಿವಾಸಿಗರ ಕ್ಷೇಮಾಭಿವೃದ್ಧಿ ಸಂಘ

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಚಾಮರಾಜಪೇಟೆಗಾಗಿ ಸಂಸದರು-ಶಾಸಕರಿಂದ ಮಾಸಿಕ ಸಭೆ: ಪಿ.ಸಿ.ಮೋಹನ್‌ ಭರವಸೆ

    ಸಂಬಂಧಿತ ಸುದ್ದಿ: ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!