Friday, May 17, 2024
spot_img
More

    Latest Posts

    ಎಸ್‌ಜಿಇಸಿಟಿ 4ನೇ ವಾರ್ಷಿಕೋತ್ಸವ: ಉಚಿತ ವೈದ್ಯಕೀಯ ತಪಾಸಣೆ, ರಕ್ತದಾನ ಶಿಬಿರ

    ಬೆಂಗಳೂರು: ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌(ಎಸ್‌ಜಿಇಸಿಟಿ)ನ ನಾಲ್ಕನೇ ವಾರ್ಷಿಕೋತ್ಸವ ಸಮಾರಂಭವನ್ನು ಮಾ. 25ರಂದು ಬೆಂಗಳೂರಿನ ನಂದಿನಿ ಬಡಾವಣೆಯ 4ನೇ ಬ್ಲಾಕ್‌ನ ಯೋಗಕೇಂದ್ರದಲ್ಲಿ ನಡೆಸಲಾಯಿತು.

    ಅಕಾಡೆಮಿಯ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಉಪಮಹಾಪೌರ ಎಸ್‌.ಹರೀಶ್‌ ಅವರು ಉದ್ಘಾಟಿಸಿದರು.

    ವೃತ್ತಿ ಆಧಾರಿತ ಹಾಗೂ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನುಅಕಾಡೆಮಿ ಪ್ರಾರಂಭಿಸಿ ಅಚ್ಚುಕಟ್ಟಾಗಿ ನಡೆಸುತ್ತಿರುವುದನ್ನು ಹರೀಶ್‌ ಶ್ಲಾಘಿಸಿದರು. ಮುಖ್ಯಮಂತ್ರಿ ಅವರ ಕೌಶಲ್ಯಾಭಿವೃದ್ಧಿ ಯೋಜನೆಗಳನ್ನು ಹಂತಹಂತವಾಗಿ ಹಮ್ಮಿಕೊಳ್ಳಲು ಸೂಚಿಸಿದರು. ಇದೇ ವೇಳೆ ಅವರು ಟ್ರಸ್ಟ್‌ನ ವಾರ್ಷಿಕ ಸಂಚಿಕೆಯನ್ನೂ ಬಿಡುಗಡೆ ಮಾಡಿದರು.

    ಪ್ರಾಥಮಿಕ ಶಿಕ್ಷಣ ಇಲಾಖೆ ನಿವೃತ್ತ ನಿರ್ದೇಶಕ ಬಿ.ಕೆ. ಬಸವರಾಜು ಅವರು ಅಕಾಡೆಮಿಯ ನಿರ್ದೇಶಕರ ಕಾರ್ಯವೈಖರಿ, ಟ್ರಸ್ಟ್ ನಡೆದು ಬಂದ ದಾರಿ ಹಾಗೂ ಹಮ್ಮಿಕೊಂಡಿರುವ ಬ್ಯೂಟಿಷಿಯನ್ ಮತ್ತು ಕಂಪ್ಯೂಟರ್ ಕೋರ್ಸ್‌ಗಳ ಬಗ್ಗೆ ತಿಳಿಸಿದರು. ಅಕಾಡೆಮಿಯ ವರದಿಯನ್ನು ಟ್ರಸ್ಟೀ ಆರ್.ವಿ. ನಾಗಭೂಷಣ್ ಓದಿದರು.

    ಖಾದಿ ಮತ್ತು ಗ್ರಾಮ ಕೈಗಾರಿಕಾ ಆಯೋಗದ ದಕ್ಷಿಣ ವಲಯದ ನಿರ್ದೇಶಕ ಡಾ.ಇ. ಮೋಹನ್‌ ರಾವ್‌ ಮುಖ್ಯ ಅತಿಥಿಯಾಗಿ ಆಗಮಿಸಿದ್ದು, ಎರಡು ತಿಂಗಳ ಉಚಿತ ಬ್ಯೂಟಿಷಿಯನ್ ಮತ್ತು ಬೇಸಿಕ್ ಕಂಪ್ಯೂಟರ್‌ ತರಬೇತಿಯಲ್ಲಿಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿದರು.

    ನಂದಿನಿ ಬಡಾವಣೆ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಎಂ.ಪ್ರಸನ್ನ ಅವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿದರು.

    ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಸಂಸ್ಥಾಪಕ ಟ್ರಸ್ಟೀ ಆರ್.ನಾಗರಾಜ ಶೆಟ್ಟಿ ಅವರಿಗೆ ಸನ್ಮಾನ

    ಸನ್ಮಾನಿತರು

    ಬೆಂಗಳೂರಿನ ಸ್ಕಂದ ಲೈಫ್‌ಸೈನ್ಸ್‌ ಸಂಸ್ಥಾಪಕ ಅಧ್ಯಕ್ಷ ಡಾ.ಎಸ್. ಯೋಗೇಶ್‌, ಮೈಸೂರಿನ ಮಾಜಿ ಮೇಯರ್‌ ಅನಂತ್‌, ಬೆಂಗಳೂರಿನ ಪೀಪಲ್‌ ಟ್ರೀ ಗ್ರೂಪ್‌ ಆಫ್‌ ಹಾಸ್ಪಿಟಲ್ಸ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎಸ್.‌ ಜ್ಯೋತಿ ನೀರಜ, ಅಂತಾರಾಷ್ಟ್ರೀಯ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ ಮಂಗಳೂರು ಅತ್ತಾವರದ ಆದರ್ಶ್‌ ವಿ. ಅತ್ತಾವರ್‌, ಬೆಂಗಳೂರಿನ ಯುವಶಕ್ತಿ ಸೇವಾ ಫೌಂಡೇಷನ್‌ ಸಂಸ್ಥಾಪಕ ಭೂಷಣ್‌ ಭಾರತೀಯ ಅವರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

    ಪ್ರಮಾಣಪತ್ರ ವಿತರಣೆ: ವಾರ್ಷಿಕೋತ್ಸವ ಪ್ರಯುಕ್ತ ಉಚಿತವಾಗಿ ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ವೈದ್ಯಕೀಯ ತಪಾಸಣೆ ಮತ್ತು ಕೌನ್ಸೆಲಿಂಗ್‌ ನಡೆಸಿದ ಸ್ಟರ್ಶ್ ಆಸ್ಪತ್ರೆಯ ವೈದ್ಯರಿಗೆ ಗೌರವಾರ್ಪಣೆ ಮಾಡಲಾಯಿತು. ರಕ್ತದಾನ ಮಾಡಿದವರಿಗೆ ಸ್ಪರ್ಶ್ ಆಸ್ಪತ್ರೆಯ ಪ್ರಮಾಣಪತ್ರ ನೀಡಲಾಯಿತು.

    ಸಮಾರಂಭದಲ್ಲಿ ಟ್ರಸ್ಟಿಗಳು, ಪೋಷಕರು, ವಿದ್ಯಾರ್ಥಿಗಳು, ಜಿಲ್ಲಾ ಸಂಘಟನಾ ಕಾರ್ಯದರ್ಶಿ, ಮಹಾ ಸಮಿತಿಯ ಸದಸ್ಯರು ಸೇರಿದಂತೆ ಸುಮಾರು 400 ಜನರು ಭಾಗವಹಿಸಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ

    ಸಂಬಂಧಿತ ಸುದ್ದಿ: ಪವರ್‌ಲಿಫ್ಟರ್‌ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!