Friday, May 17, 2024
spot_img
More

    Latest Posts

    ಕರ್ನಾಟಕ ಚುನಾವಣೆ: ಕಣದಲ್ಲಿರುವ ಗಾಣಿಗ ಅಭ್ಯರ್ಥಿಗಳ ವಿವರ ಇಲ್ಲಿದೆ..

    ಬೆಂಗಳೂರು: ದೇಶದ ಪ್ರಧಾನಿ ಆಗಿರುವ ನರೇಂದ್ರ ದಾಮೋದರದಾಸ್‌ ಮೋದಿ ಅವರು ಗಾಣಿಗ ಸಮುದಾಯದವರಾಗಿರುವುದು ತಮಗೆಲ್ಲ ಗೊತ್ತಿರುವ ವಿಚಾರವೇ. ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗಾಣಿಗ ಸಮಾಜದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಈಗಾಗಲೇ ಪ್ರಚಾರದಲ್ಲೂ ತೊಡಗಿಕೊಂಡಿದ್ದಾರೆ.

    ರಾಜ್ಯದಲ್ಲಿನ ಕುಮಟಾ-ಹೊನ್ನಾವರ, ಜಮಖಂಡಿ, ಚಿಂತಾಮಣಿ ವಿಧಾನಸಭಾ ಕ್ಷೇತ್ರಗಳಲ್ಲಿ ಗಾಣಿಗ ಸಮುದಾಯದ ಅಭ್ಯರ್ಥಿಗಳು ಕಣದಲ್ಲಿರುವುದು ತಿಳಿದುಬಂದಿದೆ. ಅವರ ಕುರಿತ ಕಿರು ವಿವರವನ್ನು ಇಲ್ಲಿ ಹಂಚಿಕೊಳ್ಳಲಾಗಿದೆ.

    ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರ

    ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೆ.ದಿನಕರ ಶೆಟ್ಟಿ ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಶಾಸಕರೂ ಆಗಿರುವ ಇವರು ತಮ್ಮ ಇದುವರೆಗಿನ ಕೆಲಸ ಹಾಗೂ ಮುಂದಿನ ಕನಸುಗಳನ್ನು ಮುಂದಿರಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಸದನದಲ್ಲಿ ಆಗ್ರಹ ವ್ಯಕ್ತಪಡಿಸಿದವರಲ್ಲಿ ಇವರು ಕೂಡ ಪ್ರಮುಖರು.

    ಸಂಬಂಧಿತ ಸುದ್ದಿ: ಗಾಣಿಗ ಸಮಾಜಕ್ಕೂ ನಿಗಮ ಸ್ಥಾಪಿಸಿ; ಶಾಸಕ ದಿನಕರ ಶೆಟ್ಟಿ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರಿಗೆ ಮನವಿ

    ಜಮಖಂಡಿ ವಿಧಾನಸಭಾ ಕ್ಷೇತ್ರ

    ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆನಂದ ನ್ಯಾಮಗೌಡ ಸ್ಪರ್ಧೆ ಮಾಡುತ್ತಿದ್ದಾರೆ. ಇವರು ಕೂಡ ಹಾಲಿ ಶಾಸಕರಾಗಿದ್ದು, ತಮ್ಮ ಇದುವರೆಗಿನ ಕೆಲಸ ಹಾಗೂ ಮುಂದಿನ ಕನಸುಗಳನ್ನು ಮುಂದಿರಿಸಿಕೊಂಡು ಚುನಾವಣೆಯನ್ನು ಎದುರಿಸುತ್ತಿದ್ದಾರೆ. ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಸದನದಲ್ಲಿ ಆಗ್ರಹ ವ್ಯಕ್ತಪಡಿಸಿದವರಲ್ಲಿ ಇವರು ಕೂಡ ಪ್ರಮುಖರು.

    ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ‌ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ

    ಚಿಂತಾಮಣಿ ವಿಧಾನಸಭಾ ಕ್ಷೇತ್ರ

    ಚಿಂತಾಮಣಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಎನ್.‌ ವೇಣುಗೋಪಾಲ್‌ ಸ್ಪರ್ಧೆ ಮಾಡುತ್ತಿದ್ದಾರೆ. ಇವರು ಸಮಾಜಕ್ಕೆ ಸಂಬಂಧಿಸಿದ ಹಲವಾರು ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ಇದೀಗ ದೊಡ್ಡಮಟ್ಟದಲ್ಲಿ ಜನಪರ ಕಾರ್ಯಗಳನ್ನು ಮಾಡುವ ಸಲುವಾಗಿ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ.

    ಉಳಿದಂತೆ ಕಣದಲ್ಲಿರುವ ಗಾಣಿಗ ಸಮುದಾಯದ ಇತರ ಅಭ್ಯರ್ಥಿಗಳು

    ಅಥಣಿ ವಿಧಾನಸಭಾ ಕ್ಷೇತ್ರ: ಲಕ್ಷ್ಮಣ ಸಂಗಪ್ಪ ಸವದಿ, ಕಾಂಗ್ರೆಸ್‌
    ಕಲಘಟಗಿ ವಿಧಾನಸಭಾ ಕ್ಷೇತ್ರ: ನಾಗರಾಜ ಚೆಬ್ಬಿ, ಬಿಜೆಪಿ
    ಸಿಂದಗಿ ವಿಧಾನಸಭಾ ಕ್ಷೇತ್ರ: ರಮೇಶ ಭೂಸನೂರ, ಬಿಜೆಪಿ
    ಬಸವನಬಾಗೇವಾಡಿ ವಿಧಾನಸಭಾ ಕ್ಷೇತ್ರ: ಎಸ್‌.ಕೆ.ಬೆಳ್ಳುಬ್ಬಿ, ಬಿಜೆಪಿ
    ಭದ್ರಾವತಿ ವಿಧಾನಸಭಾ ಕ್ಷೇತ್ರ: ಬಿ.ಕೆ.ಸಂಗಮೇಶ್ವರ್, ಕಾಂಗ್ರೆಸ್‌
    ಹಾನಗಲ್‌ ವಿಧಾನಸಭಾ ಕ್ಷೇತ್ರ: ಶಿವರಾಜ ಸಜ್ಜನರ್, ಬಿಜೆಪಿ
    ಬಾದಾಮಿ ವಿಧಾನಸಭಾ ಕ್ಷೇತ್ರ: ಶಾಂತಗೌಡ ಪಾಟೀಲ್‌

    ಸದ್ಯಕ್ಕೆ ಗಮನಕ್ಕೆ ಬಂದಿರುವ ಅಭ್ಯರ್ಥಿಗಳ ವಿವರಗಳನ್ನು ಇಲ್ಲಿ ಪ್ರಕಟಿಸಲಾಗಿದೆ. ಇವರ ಹೊರತಾಗಿಯೂ ಈ ಸಲದ ಚುನಾವಣಾ ಕಣದಲ್ಲಿರುವ ಗಾಣಿಗ ಸಮಾಜದ ಅಭ್ಯರ್ಥಿಗಳ ವಿವರವನ್ನು ಸಂಬಂಧಪಟ್ಟವರು ಕಳುಹಿಸಿಕೊಟ್ಟಲ್ಲಿ ಆ ವಿವರಗಳನ್ನೂ ಪ್ರಕಟಿಸಲಾಗುವುದು. ವಿವರವನ್ನು ಫೋಟೋ ಸಹಿತ [email protected] ಇಲ್ಲಿಗೆ ಕಳಿಸಬೇಕು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ

    ಸಂಬಂಧಿತ ಸುದ್ದಿ: ಪವರ್‌ಲಿಫ್ಟರ್‌ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!