Saturday, September 21, 2024
spot_img
More

    Latest Posts

    ಎಸ್‌ಎಸ್‌ಎಲ್‌ಸಿ-ಪಿಯುಸಿ ನಂತರ ಮುಂದೇನು?: ವಿದ್ಯಾರ್ಥಿಗಳ ಮಾರ್ಗದರ್ಶನಕ್ಕಾಗಿ ಕಾರ್ಯಾಗಾರ

    ಬೆಂಗಳೂರು: ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಸಾಕಷ್ಟು ಚಟುವಟಿಕೆಯಿಂದ ಇರುವ ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟೇಬಲ್‌ ಟ್ರಸ್ಟ್‌ ಎಸ್‌ಎಸ್‌ಎಲ್‌ಸಿ-ಪಿಯುಸಿ ಪಾಸಾದ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.

    ‘ಎಸ್‌ಎಸ್‌ಎಲ್‌ಸಿ-ಪಿಯುಸಿ ನಂತರ ಮುಂದೇನು?’ ಎಂಬ ನಿಟ್ಟಿನಲ್ಲಿ ಆಯೋಜನೆಗೊಂಡಿರುವ ಈ ಕಾರ್ಯಾಗಾರ ಬೆಂಗಳೂರಿನಲ್ಲಿರುವ ಎಸ್‌ಜಿಇಸಿಟಿ ಅಕಾಡೆಮಿಯಲ್ಲಿ ಮೇ 17ರಂದು ನಡೆಯಲಿದೆ.

    ಪ್ರಾಥಮಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬಿ.ಕೆ. ಬಸವರಾಜು, ಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರೊಫೆಸರ್‌ ಡಾ.ಜಿ. ವಿಶ್ವನಾಥಪ್ಪ ಮುಂತಾದ ಹಿರಿಯ ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ.

    ಎಸ್‌ಎಸ್‌ಎಲ್‌ಸಿ- ಪಿಯುಸಿ ಬಳಿಕ ಯಾವ ಕೋರ್ಸ್ ಸೂಕ್ತ, ಅದಕ್ಕೆ ತಯಾರಿ ಹಾಗೂ ಕಲಿಕೆ ಹೇಗೆ ಇಂಬಿತ್ಯಾದಿ ಅಂಶಗಳ ಕುರಿತು ಈ ಕಾರ್ಯಾಗಾರದಲ್ಲಿ ಮಾಹಿತಿ ನೀಡಿ ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಮೇ 17ರ ಬೆಳಗ್ಗೆ 10ರಿಂದ ಮಧ್ಯಾಹ್ನ 1 ಮತ್ತು ಮಧ್ಯಾಹ್ನ 2.30ರಿಂದ ಸಂಜೆ 5.30ರ ವರೆಗೆ ಈ ಕಾರ್ಯಾಗಾರ ನಡೆಯಲಿದೆ. ಆಸಕ್ತರು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಎಸ್‌ಜಿಇಸಿಟಿ ಸಂಸ್ಥಾಪಕ ಟ್ರಸ್ಟೀ ಆರ್.ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಸಂಖ್ಯೆಗಳು: 9480322851, 9739583550, 8431775998, 9901077896

    ನೋಂದಣಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ: https://forms.gle/xUqSwuACNuheWHXn9

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ‌ ಸ್ಥಾಪನೆ; ಕೊನೆಗೂ ಈಡೇರಿತು ಬಹುಕಾಲದ ಪ್ರಾರ್ಥನೆ

    ಸಂಬಂಧಿತ ಸುದ್ದಿ: ಮೇ 28ರಂದು ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಅಮೃತ ಮಹೋತ್ಸವ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!