Saturday, September 21, 2024
spot_img
More

    Latest Posts

    ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಅರ್ಪಿತಾ ಹರೀಶ್‌ ಅವಿರೋಧ ಆಯ್ಕೆ

    ಬೆಂಗಳೂರು: ರಾಮನಗರ ಜಿಲ್ಲೆಯ ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗಾಣಿಗ ಸಮುದಾಯದ ಅರ್ಪಿತಾ ಹರೀಶ್ ಅವಿರೋಧವಗಿ ಆಯ್ಕೆ ಆಗಿದ್ದಾರೆ. ಈ ಮೂಲಕ ಎರಡನೇ ಅವಧಿಗೆ ಮತ್ತೊಮ್ಮೆ ಅಧ್ಯಕ್ಷರಾಗಿದ್ದಾರೆ.

    ರಾಮನಗರ ಜಿಲ್ಲೆ ಕನಕಪುರ ತಾಲೂಕು ದೊಡ್ಡಮರಳವಾಡಿ ಗ್ರಾಮದ ವೆಂಕಟೇಶಪ್ಪ ಮತ್ತು ವೆಂಕಟಮ್ಮ ದಂಪತಿಯ ಪುತ್ರಿಯಾದ ಇವರು ಆರಂಭಿಕ ಶೈಕ್ಷಣಿಕ ವಿದ್ಯಾಭ್ಯಾಸವನ್ನು ದೊಡ್ಡಮರಳವಾಡಿ ಸರ್ಕಾರಿ  ಶಾಲೆಯಲ್ಲಿ ಮುಗಿಸಿ ನಂತರ ಬೆಂಗಳೂರಿನ ರಾಜಾಜಿನಗರ ಸಾಯಿ ಮಹಿಳಾ ಕಾಲೇಜಿನಲ್ಲಿ ಪಿಯುಸಿ ಮತ್ತು ಬಿ.ಕಾಂ ಪದವಿ ಪಡೆದಿರುತ್ತಾರೆ.

    ಆ ನಂತರ ರಾಜಾಜಿನಗರದ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದು 2016ರಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದರು. ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ವಕೀಲಿಕೆ ಜೊತೆಗೆ ಹಲವು ಸಾಮಾಜಿಕ ಹೋರಾಟದಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡಿದ್ದರು.

    ಗ್ರಾಮಗಳಲ್ಲಿ ಹಿಂದುಳಿದವರಿಗೆ ಸ್ಮಶಾನಕ್ಕೆ ಜಾಗಗಳನ್ನು ಕೊಡಿಸುವಲ್ಲಿ ಇವರು ಯಶಸ್ವಿಯಾಗಿದ್ದು, ರಾಮನಗರ ಮತ್ತು ಚನ್ನಪಟ್ಟಣ ತಾಲೂಕಿನ ಸರ್ಕಾರಿ ಶಾಲೆಯ ಉಳಿವಿಗಾಗಿ ಹೋರಾಟ ಮಾಡಿದ್ದಾರೆ.

    ರಾಜಕೀಯಕ್ಕೂ ಪ್ರವೇಶ ಮಾಡಿರುವ ಇವರು ಪ್ರಸ್ತುತ ರಾಮನಗರ ತಾಲೂಕಿನ ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿಗೆ ಮನಮಾನಹಳ್ಳಿ ಕ್ಷೇತ್ರದಿಂದ ಆಯ್ಕೆ ಆಗಿರುತ್ತಾರೆ. ಈ ಎರಡನೇ ಅವಧಿಯ ಅಧ್ಯಕ್ಷರ ಚುನಾವಣೆಯಲ್ಲಿಇವರು ಅವಿರೋಧವಾಗಿ ಆಯ್ಕೆ ಆಗಿರುತ್ತಾರೆ. ಇವರ ಪತಿ ಹರೀಶ್ ಕುಮಾರ್ ಕೂಡ ವಕೀಲರಾಗಿದ್ದು, ಇವರಿಗೆ ಧವನ್ ಕಲ್ಯಾಣ್ ಮತ್ತು ಹುವೀಶ್ಕಾ ಎಂಬ ಮಕ್ಕಳಿರುತ್ತಾರೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಇಬ್ಬರು ಗ್ರಾಮ ಪಂಚಾಯತ್‌ ಅಧ್ಯಕ್ಷ-ಉಪಾಧ್ಯಕ್ಷರಾಗಿ ಆಯ್ಕೆ

    ಸಂಬಂಧಿತ ಸುದ್ದಿ: ಮಧ್ಯಪ್ರದೇಶದಲ್ಲೂ ಗಾಣಿಗ ನಿಗಮ ಸ್ಥಾಪನೆ; ಅಧ್ಯಕ್ಷರಾಗಿ ರವಿಕರಣ್‌ ಸಾಹು ನೇಮಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!