Friday, May 17, 2024
spot_img
More

    Latest Posts

    ಸಣ್ಣ ಸಮುದಾಯ ಹಿಂದುಳಿಯಲು ದ್ವಿಮುಖ ನೀತಿ ಕಾರಣ: ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌

    ಬೆಂಗಳೂರು: ಜನಸಂಖ್ಯೆಯಲ್ಲಿ ಕಡಿಮೆ ಇರುವ ಸಣ್ಣ ಸಮುದಾಯಗಳು ಸಾಮಾಜಿಕ, ಆರ್ಥಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿಯಲು ಸರ್ಕಾರಗಳ ದ್ವಿಮುಖ ನೀತಿಗಳು ಕಾರಣ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್. ಸುದರ್ಶನ್ ಬೇಸರ ವ್ಯಕ್ತಪಡಿಸಿದರು.

    ಚಾಮರಾಜನಗರದ ನಂದಿ ಭವನದಲ್ಲಿ ಚಾಮರಾಜನಗರ ಜಿಲ್ಲಾ ಜ್ಯೋತಿಪಣ ಗಾಣಿಗರ ಸಂಘದ ವತಿಯಿಂದ ನಡೆದ ಗುರುವಂದನಾ ಕಾರ್ಯಕ್ರಮ, ಜಿಲ್ಲಾ ಗಾಣಿಗರ ಸಮಾವೇಶ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶಿವಜ್ಯೋತಿ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಯಾವುದೇ ಸಮುದಾಯಕ್ಕೆ ಸಂಘಟನೆ, ಜಾಗೃತಿ, ಹೋರಾಟ, ಶಿಕ್ಷಣ ಬಹಳ ಮುಖ್ಯ. ಆದರೆ ಕೆಲ ಹಿಂದುಳಿದ ಸಮಾಜಗಳಿಗೆ ಎಲ್ಲಾ ಕ್ಷೇತ್ರಗಳಲ್ಲಿ ಹಿನ್ನಡೆ ಉಂಟಾಗಿದೆ. ಇವತ್ತಿನ ಸಂವಿಧಾನ ವ್ಯವಸ್ಥೆಯಲ್ಲಿ ಜಾತಿ ವ್ಯವಸ್ಥೆ ಇಲ್ಲದಿದ್ದರೂ ವಸ್ತುಸ್ಥಿತಿಯಲ್ಲಿ ಜಾತಿ ವ್ಯವಸ್ಥೆ ಜೀವಂತವಾಗಿದೆ. ಇದನ್ನು ಹೋಗಲಾಡಿಸಲು ಮತ್ತು ಸಮ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಪ್ರಯತ್ನ ಮಾಡಬೇಕಿದೆ ಎಂದು ಹೇಳಿದರು.

    ಶ್ರೀ ಕ್ಷೇತ್ರ ಮಹಾಸಂಸ್ಥಾನ ಮಠದ ಶ್ರೀ ಪೂರ್ಣಾನಂದಪುರಿ ಸ್ವಾಮೀಜಿಗಳು ತಮ್ಮ ರಾಜಕೀಯ ಅಧಿಕಾರವನ್ನು ತ್ಯಜಿಸಿ ಸಮಾಜದ ಜನಾಂಗದ ಏಳಿಗೆಗಾಗಿ ಮಠ ಸ್ಥಾಪಿಸಿ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

    ದಿವ್ಯ ಸಾನಿಧ್ಯ ವಹಿಸಿದ್ದ ಗಾಣಿಗರ ಮಹಾಸಂಸ್ಥಾನ ಮಠದ ಶ್ರೀ ಪೂರ್ಣಾನಂದ ಪುರಿ ಸ್ವಾಮೀಜಿ ಮಾತನಾಡಿ, ಸಂಪುಟ ದರ್ಜೆ ಸ್ಥಾನಮಾನದಲ್ಲಿದ್ದ ನಾನು ರಾಜೀನಾಮೆ ನೀಡಿ, ಸಾಂಸಾರಿಕ ಜೀವನವನ್ನು ತ್ಯಜಿಸಿ ಸನ್ಯಾಸ ದೀಕ್ಷೆ ಸ್ವೀಕರಿಸಿ ಆಶ್ರಮ ಮಾಡಿದ್ದೇನೆ. ಈ ಮೂಲಕ ನಮ್ಮ ಸಮಾಜಕ್ಕೆ ಗುರುಪೀಠ ಸ್ಥಾಪಿಸಿ ಅವರಿಗೆ ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ದಾಸೋಹ ಪರಂಪರೆ ಪರಿಚಯಿಸುವ ಹೆಜ್ಜೆ ಇಟ್ಟಿದ್ದೇನೆ ಎಂದರು. ಬೆಂಗಳೂರು `ಸಮೀಪದ ನೆಲಮಂಗಲದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಹಕಾರದಿಂದ ಎಂಟು ಎಕರೆ ಜಮೀನು ಪಡೆದು ಗುರುಪೀಠ, ಕಲ್ಯಾಣಮಂಟಪ, ಶಾಲೆ ಮತ್ತು ವಸತಿ ನಿಲಯಗಳನ್ನು ತೆರೆಯಲಾಗಿದೆ. ಸಮಾಜದ ಬಂಧುಗಳು ಇವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸ್ವಾಮೀಜಿ ತಿಳಿಸಿದರು.

    ಸಮಾಜದ ಪ್ರತಿಯೊಬ್ಬರೂ ನ್ಯಾಯ ನೀತಿ ಧರ್ಮವನ್ನು ಪಾಲಿಸುವ ಮೂಲಕ ಕರ್ಮದಲ್ಲಿ ನಿಷ್ಠೆ ಹೊಂದಿದರೆ ಮಾತ್ರ ಎಲ್ಲರಿಗೂ ಶ್ರೇಯಸ್ಸು ಉಂಟಾಗಲಿದೆ ಎಂದು ಆಶೀರ್ವಚನ ನೀಡಿದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?

    ಸಂಬಂಧಿತ ಸುದ್ದಿ: ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸದಾಶಿವ ಗಾಣಿಗ, ಉಪಾಧ್ಯಕ್ಷರಾಗಿ ರಂಜಿನಿ ಸುಜಿತ್‌ ಗಾಣಿಗ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!