Friday, May 17, 2024
spot_img
More

    Latest Posts

    ಎಸ್‌ಜಿಇಸಿಟಿಯಿಂದ ಪ್ರತಿಭಾ ಪುರಸ್ಕಾರ; ಅರ್ಜಿ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ

    ಬೆಂಗಳೂರು: ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತ ಬಂದಿರುವ ಶ್ರೀಗಾಣಿಗ ಎಜುಕೇಷನಲ್‌ ಆ್ಯಂಡ್ ಚಾರಿಟಬಲ್ ಟ್ರಸ್‌ (ಎಸ್‌ಜಿಇಸಿಟಿ) ಗಾಣಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಆಯೋಜಿಸಿದೆ.

    2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ರ‌್ಯಾಂಕ್ ಅಥವಾ ಶೇ. 95ಕ್ಕೂ ಅಧಿಕ ಅಂಕ ಗಳಿಸಿರುವ ಗಾಣಿಗ ಸಮುದಾಯದ ಬೆಂಗಳೂರು, ಮೈಸೂರು ರೆವಿನ್ಯೂ ವಿಭಾಗದ ಜಿಲ್ಲೆಗಳ (ದಕ್ಷಿಣ ಕರ್ನಾಟಕ) ವಿದ್ಯಾರ್ಥಿಗಳಿಗೆ ಸೀಮಿತವಾಗಿ ಈ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

    ಅರ್ಹ ವಿದ್ಯಾರ್ಥಿಗಳು [email protected] ಇಲ್ಲಿಗೆ ವಿವರಗಳನ್ನು ಆ. 25ರ ಒಳಗೆ ತಲುಪುವಂತೆ ಮೇಲ್‌ ಮಾಡಬೇಕು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸದಾಶಿವ ಗಾಣಿಗ, ಉಪಾಧ್ಯಕ್ಷರಾಗಿ ರಂಜಿನಿ ಸುಜಿತ್‌ ಗಾಣಿಗ ಆಯ್ಕೆ

    ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!