Thursday, May 2, 2024
spot_img
More

    Latest Posts

    ಕರ್ನಾಟಕ ಜಾನಪದ ಪರಿಷತ್‌ ಕಲಬುರಗಿ ಘಟಕದಿಂದ ಸಚಿವರಿಗೆ ಮನವಿ         

    ಬೆಂಗಳೂರು: ಕಲಬುರಗಿ ನಗರದ ಮಧ್ಯ ಭಾಗದಲ್ಲಿ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕಕ್ಕೆ ಒಂದು ಕೇಂದ್ರ ಕಚೇರಿಯ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಮನವಿ ಸಲ್ಲಿಸಲಾಗಿದೆ.

    ಕರ್ನಾಟಕ ಜಾನಪದ ಪರಿಷತ್ತಿನ ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಡಿ.ಪಿ.ಸಜ್ಜನ, ಅಧ್ಯಕ್ಷ ಸಿ.ಎಸ್. ಮಾಲಿಪಾಟೀಲ, ಗೌರವ ಕಾರ್ಯದರ್ಶಿ ಮಲ್ಲಿಕಾರ್ಜುನ ರೋಣ ಹಾಗೂ ಪದಾಧಿಕಾರಿಗಳು ಜೊತೆಯಾಗಿ ಸಚಿವರಿಗೆ ಈ ಮನವಿ ಪತ್ರ ನೀಡಿದರು.

    ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು,ಇದು ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಪರಿಷತ್ತಾದರೂ ಕಲಬುರಗಿ ಜಿಲ್ಲಾ ಘಟಕ ಸುಮಾರು ಹದಿನೈದು ವರ್ಷಗಳಿಂದ ಸರ್ಕಾರದ ಯಾವುದೇ ಅನುದಾನ ಪಡೆಯದೆ  ಜಾನಪದ ಕಲೆ, ಸಾಹಿತ್ಯ ಸಂಸ್ಕೃತಿಯ ಕಾರ್ಯಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಆದರೆ ಇಲ್ಲಿಯವರೆಗೆ ಯಾವುದೇ ಜಿಲ್ಲಾಧಿಕಾರಿ ಕರ್ನಾಟಕ ಜಾನಪದ ಪರಿಷತ್ತಿನ ಸಭೆ ಸಮಾರಂಭ ನಡೆಸಲು ಕಚೇರಿ ಕೊಟ್ಟಿರುವುದಿಲ್ಲ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

    ಜಿಲ್ಲೆಯ ಎಲ್ಲ ತಾಲೂಕಿನ ಗ್ರಾಮಗಳ ಜಾನಪದ ಕಲಾವಿದರು ಪರಿಷತ್ತಿಗೆ ಭೇಟಿ ಮಾಡಿ ವಿಷಯ ತಿಳಿದುಕೊಳ್ಳಲು ಕಲಬುರಗಿ ಜಿಲ್ಲೆಯಲ್ಲಿ ಒಂದು ಕೇಂದ್ರ ಕಚೇರಿಯ ವ್ಯವಸ್ಥೆ ಇಲ್ಲದಂತಾಗಿದೆ. ಒಂದು ಕೇಂದ್ರ ಕಚೇರಿಗಾಗಿ ಕಲಬುರಗಿ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ಯಶವಂತ ಗುರುಕರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತಾದರೂ ಇಲ್ಲಿಯವರೆಗೆ ಯಾವುದೇ ರೀತಿಯ ಕ್ರಮ ಕೈಗೊಳ್ಳದಿರುವುದು ಶೋಚನೀಯ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕಲಾವಿದರಿಗೆ ಯಾವುದೇ ರೀತಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇನೆ, ನ್ಯಾಯ ಒದಗಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಹೊಸ ಪುಸ್ತಕ: ಸಂಗಮನಾಥ ಪಿ. ಸಜ್ಜನ ಅವರ ʼಅಕ್ಷರ ವೈಭವʼ

    ಸಂಬಂಧಿತ ಸುದ್ದಿ: ಎಸ್‌ಜಿಇಸಿಟಿಯಿಂದ ಪ್ರತಿಭಾ ಪುರಸ್ಕಾರ; ಅರ್ಜಿ ಸಲ್ಲಿಸಲು ಇನ್ನು ಮೂರೇ ದಿನ ಬಾಕಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!