Friday, May 17, 2024
spot_img
More

    Latest Posts

    ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ: ಅರ್ಪಿತಾ ಹರೀಶ್

    ಬೆಂಗಳೂರು: ಮಕ್ಕಳ ಪ್ರತಿಭೆಯನ್ನು ಗುರುತಿಸಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ. ವಿವಿಧ ಕ್ಷೇತ್ರಗಳಲ್ಲಿ ಇರುವ ಮಕ್ಕಳ ಪ್ರತಿಭೆಯನ್ನು ಇಂತಹ ಕಾರ್ಯಕ್ರಮಗಳ ಮೂಲಕ ಅನಾವರಣಗೊಳಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅರ್ಪಿತಾ ಹರೀಶ್‌ ಹೇಳಿದರು.

    ರಾಮನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ರಾಮನಗರ, ರಾಮನಗರ ಕ್ಷೇತ್ರ ಶಿಕ್ಷಣಾಧಿಕಾರಿ ಜಂಟಿಯಾಗಿ ಆಯೋಜಿಸಿದ್ದ ಸುಗ್ಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ಲಸ್ಟರ್‌ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.

    ಶತಮಾನದ ಹಳೆಯ ಈ ಸರ್ಕಾರಿ ಶಾಲೆಯಲ್ಲಿ ಆ.31ರಂದು ಈ ಪ್ರತಿಭಾ ಕಾರಂಜಿ ನಡೆಯಿತು. ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅರ್ಪಿತಾ ಹರೀಶ್‌ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ನಮ್ಮ ಗ್ರಾಮದ ಈ ಪಾಠಶಾಲೆ ಸ್ಥಾಪನೆಯಾಗಿ ಸುಮಾರು 110 ವರ್ಷ ಆಗಿದ್ದು, ಈ ಶಾಲೆಯ ಶತಮಾನೋತ್ಸವ ಸಮಾರಂಭ ಏರ್ಪಡಿಸಲು ಎಲ್ಲರ ಸಹಕಾರ ಅತ್ಯಮೂಲ್ಯವಾಗಿದೆ. ಮೊದಲ ಹಂತದಲ್ಲಿ ಮಕ್ಕಳ ಪ್ರತಿಭೆ ಗುರುತಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ. ಶಿಕ್ಷಕರೆಲ್ಲರೂ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಗುರುತಿಸುವ ಮೂಲಕ ಸಹಕಾರ ನೀಡಬೇಕೆಂದು ತಿಳಿಸಿದರು.‌

    ಸಂಬಂಧಿತ ಸುದ್ದಿ: ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಅರ್ಪಿತಾ ಹರೀಶ್‌ ಅವಿರೋಧ ಆಯ್ಕೆ

    ಕ್ಲಸ್ಟರ್‌ ಹಂತದಲ್ಲಿ ವಿಜೇತ ಅತ್ಯುತ್ತಮ ಪ್ರತಿಭೆಗಳಿಗೆ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವ ಅವಕಾಶವಿದ್ದು, ಇದರ ಸದುಪಯೋಗ ಪಡೆದು ಮಕ್ಕಳನ್ನು ವಿವಿಧ ಹಂತಗಳಲ್ಲಿ ಸ್ಪರ್ಧಿಸುವಂತೆ ಗಮನ ಹರಿಸಬೇಕು ಎಂದು ಜಾಹ್ನವಿ ಅಕಾಡೆಮಿ ಕಾರ್ಯದರ್ಶಿ ಶಿಲ್ಪಾ ಹೇಳಿದರು.

    ಗ್ರಾಮ ಪಂಚಾಯತ್ ಸದಸ್ಯ ರಾಂಪುರ ಗೋವಿಂದಾಜು, ಎಸ್‌ಡಿಎಂಸಿ ಅಧ್ಯಕ್ಷ, ಪೊಲೀಸ್ ಅಧಿಕಾರಿ ಬಸವರಾಜು, ಅರ್ಚಕರಾದ ಲೋಕೇಶ್, ರಮೇಶ್ ಹಾಗೂ ಸಿಆರ್‌ಪಿ ರೇಣುಕಮ್ಮ ಮತ್ತು ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ಎಲ್ಲ ಶಾಲೆಗಳ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಯವರು ಮಾತ್ರವಲ್ಲದೆ, ಸುಗ್ಗನಹಳ್ಳಿ ಗ್ರಾಮಸ್ಥರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಪ್ರತಿಭಾ ಕಾರಂಜಿಯಲ್ಲಿ ಜಯ ಗಳಿಸಿದ ಮಕ್ಕಳಿಗೆ ಅರ್ಪಿತಾ ಹರೀಶ್‌ ಬಹುಮಾನ ವಿತರಿಸಿದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?

    ಸಂಬಂಧಿತ ಸುದ್ದಿ: ಎಸ್‌ಜಿಇಸಿಟಿಯಿಂದ ಜ್ಞಾನಜ್ಯೋತಿ ಯೋಗ ಅಧ್ಯಯನ ಕೇಂದ್ರ ಆರಂಭ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!