Saturday, September 21, 2024
spot_img
More

    Latest Posts

    ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ 62ನೇ ವಾರ್ಷಿಕ ಮಹಾಸಭೆ; ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

    ಬೆಂಗಳೂರು: ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜ ಬಾರ್ಕೂರು ಇದರ 62ನೇ ವಾರ್ಷಿಕ ಮಹಾಸಭೆಯು ಬಾರ್ಕೂರು ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನ ಆವರಣದಲ್ಲಿರುವ ಕಚೇರಿಯಲ್ಲಿ ಸೆ. 23ರ ರವಿವಾರ ನಡೆಯಿತು.

    ಸಂಘದ ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಉಪಾಧ್ಯಕ್ಷರಾದ ಉದಯ್ ಕುಮಾರ್ ಉಡುಪಿ, ಶೇವಧಿ ಸುರೇಶ್ ಗಾಣಿಗ ಕೋಟ, ಪ್ರದಾನ ಕಾರ್ಯದರ್ಶಿ ನಾಗರಾಜ್ ಗಾಣಿಗ ಸಾಲಿಗ್ರಾಮ, ಕೋಶಾಧಿಕಾರಿ ಗುರುರಾಜ್ ಗಾಣಿಗ ಕೆಮ್ಮಣ್ಣು, ಕಾನೂನು ಸಲಹೆಗಾರ ನಾಗರಾಜ್ ಮಾಲ್ತಾರು ಉಪಸ್ಥಿತರಿದ್ದರು. ಆಗಮಿಸಿದ ಸದಸ್ಯರ ಸಮ್ಮುಖದಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಸಮಾಜದ ಅಭ್ಯುದಯದ ಕುರಿತು ಚರ್ಚೆ ನಡೆಸಲಾಯಿತು.

    ಅಧ್ಯಕ್ಷ ಸೂರ್ಯನಾರಾಯಣ ಗಾಣಿಗ ಮಟಪಾಡಿ ಅವರ ಮಾತು

    ಶ್ರೀ ವೇಣುಗೋಪಾಲಕೃಷ್ಣ ಸೊಸೈಟಿಯ ನಾಮನಿರ್ದೇಶಕ ಸದಸ್ಯ ನಾಗರಾಜ್ ಗಾಣಿಗ ತೆಂಕನಿಡಿಯೂರು ಅವರು ಸಭೆಯ  ಪ್ರಾಯೋಜಕತ್ವ ವಹಿಸಿಕೊಂಡಿದ್ದರು. ಸಂಘದ ಮಾಜಿ ಕಾರ್ಯದರ್ಶಿಗಳಾದ ಪ್ರಭಾಕರ್ ಉದ್ಯಾವರ, ಸೊಸೈಟಿ ಅಧ್ಯಕ್ಷ ವಿಜಯ್ ಕುಮಾರ್ ಉಡುಪಿ, ದಿನೇಶ್ ಗಾಣಿಗ ಕುಂಜಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಕುಮಟಾ ಗಾಣಿಗ ಯುವ ಬಳಗಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!