Thursday, May 2, 2024
spot_img
More

    Latest Posts

    ನಟ ದಿಗಂತ್ ‘ಅಪಘಾತಕ್ಕೆ’ ಜೊತೆಯಾದ ನಿರೂಪ್ ಭಂಡಾರಿ!

    ಬೆಂಗಳೂರು: ನಟ ದಿಗಂತ್ ‘ಅಪಘಾತಕ್ಕೆ’ ಇದೀಗ ನಿರೂಪ್ ಭಂಡಾರಿ ಕೂಡ ಜೊತೆಯಾಗಿದ್ದಾರೆ. ಅರ್ಥಾತ್, ಗುರುದತ್ ಗಾಣಿಗ ಹಾಗೂ ಸಮರ್ಥ್‌ ಬಿ. ಕಡಕೋಳ್‌ ಜಂಟಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ದಿಗಂತ್ ಅಭಿನಯದ ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರದಲ್ಲಿ ‘ರಂಗಿತರಂಗ’ ಖ್ಯಾತಿಯ ನಿರೂಪ್ ಭಂಡಾರಿ ಕೂಡ ಜೊತೆಯಾಗಿದ್ದು, ವಿಶೇಷವಾದ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

    ಈ ಸಿನಿಮಾದಲ್ಲಿ ನಿರೂಪ್ ಅತಿಥಿ ಪಾತ್ರದಲ್ಲಿ ಮಿಂಚಿದ್ದಾರೆ. ಅವರು ದಿಗಂತ್ ಅಭಿನಯದ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಲು ಕಾರಣ ಸಿನಿಮಾ ಕಥೆ ಮತ್ತು ಕಾನ್ಸೆಪ್ಟ್. ಕಮರ್ಷಿಯಲ್ ಸಿನಿಮಾಗಳ ಮಧ್ಯೆ ಇಂಥದ್ದೊಂದು ವಿಭಿನ್ನ ರೀತಿಯ ಕಾನ್ಸೆಪ್ಟ್ ಇರುವ ಚಿತ್ರದ ಕಥೆ ಕೇಳಿ ನಿರೂಪ್ ಇಂಪ್ರೆಸ್ ಆಗಿದ್ದಾರೆ.

    ಇನ್ನು ಯಂಗ್ ಆ್ಯಂಡ್ ಎನರ್ಜೆಟಿಕ್​ ಆಗಿರುವ ತಂಡ ನೋಡಿ ಈ ಸಿನಿಮಾದಲ್ಲಿ ತಾವು ಕೂಡ ಭಾಗಿ ಆದರೆ ಚೆನ್ನಾಗಿರುತ್ತೆ ಎಂದು ಅವರು ಈ ಚಿತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಆದರೆ ನಿರೂಪ್ ಈ ಚಿತ್ರದಲ್ಲಿ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಅವರ ಪಾತ್ರ ಹೇಗಿರಲಿದೆ ಎಂಬ ಕುರಿತು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ.

    ಎಡಗೈ ಬಳಸುವವರ ಸಮಸ್ಯೆಯೇ ಈ ಚಿತ್ರದ ಕಥಾಹಂದರವಾಗಿದ್ದು, ದಿಗಂತ್ ಮಂಚಾಲೆ ಈ ಚಿತ್ರದಲ್ಲಿ ಲೆಫ್ಟ್​ ಹ್ಯಾಂಡೆಡ್ ನಾಯಕನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಆಗಸ್ಟ್​ 13ರಂದು ‘ವಿಶ್ವ ಎಡಗೈ ಬಳಕೆದಾರರ ದಿನʼದ ಪ್ರಯುಕ್ತ ಎಡಗೈ ಬಳಸುವವರಿಗೆ ಅನುಕೂಲ ಆಗುವ ರೀತಿಯಲ್ಲಿ ಹೊಸ ಬಗೆಯ ಹೆಲ್ಮೆಟ್​ ಕೂಡ ಲಾಂಚ್​ ಮಾಡಲಾಗಿತ್ತು.

    ʼಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಸಮರ್ಥ್ ಬಿ. ಕಡಕೊಳ್ ನಿರ್ದೇಶನ ಮಾಡುತ್ತಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ‘ಹೈಫನ್ ಪಿಕ್ಚರ್ಸ್ ಬ್ಯಾನರ್’ ಅಡಿಯಲ್ಲಿ ‘ಅಂಬಿ ನಿಂಗ್ ವಯಸ್ಸಾಯ್ತೋ’ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುದತ್ ಗಾಣಿಗ ಮತ್ತು ನಿರ್ದೇಶಕ ಸಮರ್ಥ್ ಬಿ. ಕಡಕೊಳ್ ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆಗೆ ಜೋಡಿಯಾಗಿ ನಟಿ ಧನು ಹರ್ಷ ಅಭಿನಯಿಸಿದ್ದಾರೆ. ಖ್ಯಾತ ನಟಿಯರಾದ ರಾಧಿಕಾ ನಾರಾಯಣ್ ಮತ್ತು ನಿಧಿ ಸುಬ್ಬಯ್ಯ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ:ನಾಗೇಂದ್ರ ಗಾಣಿಗ ನಿರ್ದೇಶನದ ‘ಅಭಿರಾಮಚಂದ್ರ’ ಸಿನಿಮಾ ಟ್ರೇಲರ್ ರಿಲೀಸ್; ಅ. 6ರಂದು ಚಿತ್ರ ಬಿಡುಗಡೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!