Friday, May 17, 2024
spot_img
More

    Latest Posts

    ಪ್ರತಿಭಾ ಪುರಸ್ಕಾರಕ್ಕಾಗಿ ಗಾಣಿಗ ಯುವ ಬಳಗದಿಂದ ಅರ್ಜಿ ಆಹ್ವಾನ

    ಬೆಂಗಳೂರು: ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗುರುತಿಸಿ ಗೌರವಿಸುವ ಸಲುವಾಗಿ ಕುಮಟಾ ಗಾಣಿಗ ಯುವ ಬಳಗ (ರಿ) ಅರ್ಜಿಯನ್ನು ಆಹ್ವಾನಿಸಿದೆ.

    ಗಾಣಿಗ ಯುವ ಬಳಗದ ನಾಲ್ಕನೇ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭವು ಅ. 22ರ ರವಿವಾರ ಬೆಳಗ್ಗೆ 10-00 ಗಂಟೆಯಿಂದ ಕುಮಟಾದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು.

    ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 90 ಮತ್ತು ಪಿಯುಸಿಯಲ್ಲಿ ಶೇ. 85 ಅಥವಾ ಅದಕ್ಕೂ ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಕುಮಟಾ ತಾಲೂಕಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಥವಾ ಕುಮಟಾ ತಾಲೂಕು ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗಷ್ಟೇ ಸೀಮಿತವಾಗಿ ಈ ಪುರಸ್ಕಾರ ನಡೆಯಲಿದೆ.

    ಅರ್ಹ ವಿದ್ಯಾರ್ಥಿಗಳು ಈ ಕೆಳಗಿನ ಅರ್ಜಿ ನಮೂನೆಯಲ್ಲಿ ವಿವರಗಳನ್ನು ನಮೂದಿಸಿ ಅ.16ರ ಒಳಗೆ ತಲುಪುವಂತೆ ಗಾಣಿಗ ಯುವ ಬಳಗದ ವಾಟ್ಸ್ಯಾಪ್‌ ಸಹಾಯವಾಣಿ (9742252260) ಸಂಖ್ಯೆಗೆ ಕಳುಹಿಸಿಕೊಡಬೇಕು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಸ್ವಾಮೀಜಿದ್ವಯರ ದರ್ಶನ-ಆಶೀರ್ವಾದ ಪಡೆದ ಕುಮಟಾ ಗಾಣಿಗ ಯುವ ಬಳಗ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!