Friday, May 17, 2024
spot_img
More

    Latest Posts

    ಸಮಗ್ರ ಕರ್ನಾಟಕ ಕಾರ್ಮಿಕರ ಸಂಘದಿಂದ ೧೧ರಂದು ರಾಜ್ಯೋತ್ಸವ ಆಚರಣೆ

    ಬೆಂಗಳೂರು: ಸಮಗ್ರ ಕರ್ನಾಟಕ ಕಾರ್ಮಿಕರ ಸಂಘ NGO (ನೋ.) ಹಾಗೂ ಹೊಯ್ಸಳ ಯುವಕರ ಸಂಘವು ಜಂಟಿಯಾಗಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿವೆ. ಈ ಸಮಾರಂಭವು ನವೆಂಬರ್‌ ೧೧ರಂದು ನಡೆಯಲಿದೆ.

    ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನ ವಾರ್ಡ್ ಸಂಖ್ಯೆ -157ರಲ್ಲಿ ನಡೆಯಲಿರುವ ಈ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ರಥೋತ್ಸವ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಕೂಡ ಇರಲಿದೆ ಎಂದು ಸಮಸ್ತ ಕರ್ನಾಟಕ ಕಾರ್ಮಿಕರ ಸಂಘದ ಸಂಸ್ಥಾಪಕ ಯತೀಶ್‌ ಕುಮಾರ್‌ ತಿಳಿಸಿದ್ದಾರೆ.

    ಅಂದು ಬೆಳಗ್ಗೆ ಹತ್ತು ಗಂಟೆಗೆ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಜೊತೆಗೆ ತಾಯಿ ಭುವನೇಶ್ವರಿಯ ಕನ್ನಡ ರಥೋತ್ಸವ ಏಕಕಾಲದಲ್ಲಿ ಆರಂಭವಾಗಲಿದೆ. ಅಲ್ಲದೆ ತಾಯಿ ಭುವನೇಶ್ವರಿಯ ಕನ್ನಡ ರಥೋತ್ಸವದ ಅದ್ಧೂರಿ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ವೀರಗಾಸೆ ತಂಡಗಳು ಭಾಗವಹಿಸಲಿವೆ.

    ಸಂಜೆ ೬ ಗಂಟೆಗೆ ರಾಜ್ಯೋತ್ಸವ ಪ್ರಯುಕ್ತ ವಾದ್ಯಗೋಷ್ಠಿ ಆಯೋಜಿಸಲಾಗಿದ್ದು, ಸ್ಥಳೀಯ ಶಾಲಾ-ಕಾಲೇಜು ಮಕ್ಕಳಿಂದ ನೃತ್ಯ ಸ್ಪರ್ಧೆ ಕೂಡ ಇರಲಿದೆ. ಮುಖ್ಯ ಅತಿಥಿಗಳಿಂದ ಬಡ ಶ್ರಮಿಕ ವರ್ಗದ ಮಕ್ಕಳಿಗೆ ಶಾಲಾ ಶುಲ್ಕ ವಿತರಣೆ ಜೊತೆಗೆ ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ ಕೂಡ ನಡೆಯಲಿದೆ.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ರಾಜ್ಯಮಟ್ಟದ ಸೀನಿಯರ್​ ಪವರ್​ಲಿಫ್ಟಿಂಗ್ ಚಾಂಪಿಯನ್‌ಷಿಪ್: ಬಾಲಾರ್ಕದ ವಿಶ್ವನಾಥ್​ಗೆ ಚಿನ್ನದ ಪದಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!