Friday, May 17, 2024
spot_img
More

    Latest Posts

    ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವನಾಥ್‌ಗೆ ಬೆಳ್ಳಿ ಪದಕ

    ಬೆಂಗಳೂರು: ಭಾರತದ ಬಲಿಷ್ಠ ಪುರುಷ ಎಂದೇ ಹೆಸರಾಗಿರುವ, ಅಂತಾರಾಷ್ಟ್ರೀಯ ಮಟ್ಟದ ಪವರ್‌ಲಿಫ್ಟರ್‌ ವಿಶ್ವನಾಥ್‌ ಭಾಸ್ಕರ್‌ ಗಾಣಿಗ ಅವರು ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್‌ ಬೆಂಚ್‌ಪ್ರೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.

    ರಾಷ್ಟ್ರಮಟ್ಟದ ಪವರ್‌ಲಿಫ್ಟಿಂಗ್‌ ಬೆಂಚ್‌ಪ್ರೆಸ್‌ ಚಾಂಪಿಯನ್‌ಷಿಪ್‌-2023 ಬೆಂಗಳೂರಿನಲ್ಲಿ ನ.22ರಿಂದ 26ರ ವರೆಗೆ ಸೀನಿಯರ್, ಸಬ್‌ ಜೂನಿಯರ್‌, ಜೂನಿಯರ್‌ ಮತ್ತು ಮಾಸ್ಟರ್ಸ್‌ ವಿಭಾಗದಲ್ಲಿ ಆಯೋಜನೆಗೊಂಡಿತ್ತು.

    ಕಾಮನ್‌ವೆಲ್ತ್‌ ಗೇಮ್ಸ್‌ ಮಾತ್ರವಲ್ಲದೆ ದೇಶ-ವಿದೇಶಗಳ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ದಾಖಲೆಯೊಂದಿಗೆ ಚಿನ್ನ-ಬೆಳ್ಳಿ ಸೇರಿದಂತೆ ಹಲವು ಪದಕಗಳನ್ನು ಗಳಿಸಿರುವ ವಿಶ್ವನಾಥ್‌, ಇದೀಗ ತಮ್ಮ ʼಬಾಲರ್ಕ ಫಿಟ್‌ನೆಸ್‌ʼ ಮೂಲಕ ಉದಯೋನ್ಮುಖ ಪವರ್‌ಲಿಫ್ಟರ್‌ಗಳಿಗೆ ತರಬೇತಿಯನ್ನೂ ನೀಡುತ್ತಿದ್ದಾರೆ.

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಪವರ್‌ಲಿಫ್ಟರ್‌ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!

    ಸಂಬಂಧಿತ ಸುದ್ದಿ: ಭಳಿರೆ ‘ಬಾಲರ್ಕ’.. ಇದು ಬಲಾಢ್ಯ ಭಾರತೀಯನ ಗರಡಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!