Friday, May 17, 2024
spot_img
More

    Latest Posts

    ಪಿಜಿ ಡಿಪ್ಲೊಮಾ ಯೋಗ ಕೋರ್ಸ್‌: ಗಾಣಿಗ ಸಮುದಾಯದವರಿಗೆ ಶೇ. 50 ರಿಯಾಯಿತಿ

    ಬೆಂಗಳೂರು: ಶ್ರೀ ಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ (ಎಸ್‌ಜಿಇಸಿಟಿ) ಹೊಸದಾಗಿ ಆರಂಭಿಸಿರುವ ಜ್ಞಾನ ಜ್ಯೋತಿ ಯೋಗ ಅಧ್ಯಯನ ಕೇಂದ್ರ ಯೋಗ ಶಿಕ್ಷಕರಾಗಬೇಕು ಎಂದು ಬಯಸುವವರಿಗೆ ಅನುಕೂಲವಾಗುವ ಪಿಜಿ ಡಿಪ್ಲೊಮಾ ಯೋಗ ಕೋರ್ಸ್‌ ಹಮ್ಮಿಕೊಂಡಿದೆ.

    ವಿಶೇಷವೆಂದರೆ ಈ ಕೋರ್ಸ್‌ ಪಡೆಯಲು ಬಯಸುವ ಗಾಣಿಗ ಸಮಾಜದ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕದಲ್ಲಿ ಶೇ. 50 ರಿಯಾಯಿತಿಯನ್ನು ನೀಡಲಾಗುತ್ತಿದೆ. ವಿದ್ಯಾರ್ಥಿಗಳು, ಯುವತಿಯರು, ನಿರುದ್ಯೋಗಿಗಳು ಸೇರಿದಂತೆ ಎಲ್ಲರೂ ಇದರ ಪ್ರಯೋಜನ ಪಡೆಯಬಹುದಾಗಿದ್ದು, ಇದಕ್ಕೆ ವಯೋಮಿತಿ ಇಲ್ಲ. ಹೆಸರು ನೋಂದಾಯಿಸಿಕೊಳ್ಳಲು ನ. 30 ಕೊನೆಯ ದಿನವಾಗಿದ್ದು, ಆಸಕ್ತರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜ್ಞಾನ ಜ್ಯೋತಿ ಯೋಗ ಅಧ್ಯಯನ ಕೇಂದ್ರ ಅಧ್ಯಕ್ಷ, ನಿವೃತ್ತ ಸಹಾಯಕ ಆಯುಕ್ತ ಆರ್.ನಾಗರಾಜ ಶೆಟ್ಟಿ ತಿಳಿಸಿದ್ದಾರೆ.

    ಬೆಂಗಳೂರಿನ ನಂದಿನಿ ಬಡಾವಣೆಯ ಗಣೇಶ ಬ್ಲಾಕ್‌ನ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಇರುವ ಎಸ್‌ಜಿಇಸಿಟಿ ಕಚೇರಿಯಲ್ಲಿನ ಜ್ಞಾನ ಜ್ಯೋತಿ ಯೋಗ ಅಧ್ಯಯನ ಕೇಂದ್ರದಲ್ಲಿ ಈ ತರಬೇತಿ ನಡೆಯಲಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು. ವಿವರಗಳಿಗಾಗಿ 7019356168, 9449300964 ಅಥವಾ 9663663637 ಸಂಖ್ಯೆಗೂ ಕರೆ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

    ಮಾನಸಿಕ ಹಾಗೂ ದೈಹಿಕ ಆರೋಗ್ಯದ ಸಲುವಾಗಿ ಎಸ್‌ಜಿಇಸಿಟಿ ವತಿಯಿಂದ ಜ್ಞಾನಜ್ಯೋತಿ ಯೋಗ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇದೇ ಆ.27ರಂದು ಇದರ ಉದ್ಘಾಟನೆ ಆಗಿತ್ತು. ಯೋಗ ಶಿಕ್ಷಕರಾಗಬೇಕು ಎನ್ನುವವರಿಗಲ್ಲದೆ, ದೈನಂದಿನ ದೈಹಿಕ ಕ್ಷಮತೆಗಾಗಿ ಯೋಗಾಭ್ಯಾಸ ಮಾಡುವವರಿಗೂ ಇಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ಯೋಗ ತರಬೇತಿ ಇರಲಿದೆ.

    ಸಂಬಂಧಿತ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಗಾಣಿಗರ ಬೃಹತ್‌ ಸಮಾವೇಶ: ಉದ್ಘಾಟಿಸಲಿದ್ದಾರೆ ಸಿಎಂ

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ:  ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!