Sunday, September 22, 2024
spot_img
More

    Latest Posts

    ಉದಯ ಗಾಣಿಗ ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಆಗಲಿ; ಮಾಜಿ ಸಚಿವ ಸೊರಕೆ ಆಗ್ರಹ

    ಬೆಂಗಳೂರು: ಉದಯ ಗಾಣಿಗ ಅವರನ್ನು ಕೊಲೆ ಮಾಡಿರುವ ಎಲ್ಲ ಆರೋಪಿಗಳಿಗೂ ಜೀವಾವಧಿ ಶಿಕ್ಷೆ ವಿಧಿಸುವಂತೆ ಆಗಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಆಗ್ರಹಿಸಿದ್ದಾರೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಯಡಮೊಗೆ ಗ್ರಾಮದ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿಜೆಪಿ ಮುಖಂಡ, ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ. ಆಡಳಿತಾರೂಢ ಬಿಜೆಪಿಯವರೇ ಪ್ರಮುಖ ಆರೋಪಿ ಆಗಿರುವುದರಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ಹಸ್ತಕ್ಷೇಪವಾಗದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕು. ಮೃತ ಉದಯ ಗಾಣಿಗರ ನೊಂದ ಕುಟುಂಬಕ್ಕೆ ನ್ಯಾಯ ಸಿಗುವಂತಾಗಬೇಕು ಎಂದು ಸೊರಕೆ ಹೇಳಿದರು.

    ವಿನಯಕುಮಾರ್ ಸೊರಕೆ, ಉದಯ ಗಾಣಿಗ

    ಇತ್ತೀಚೆಗೆ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾದಂತೆ ಉದಯ ಗಾಣಿಗ ಕೊಲೆ ಪ್ರಕರಣದಲ್ಲೂ ಎಲ್ಲ ಆರೋಪಿಗಳಿಗೂ ಜೀವಾವಧಿ ಶಿಕ್ಷೆಯಾಗಬೇಕು. ಈ ಪ್ರಕರಣದಲ್ಲಿ ಯಾವ ಆರೋಪಿಯೂ ತಪ್ಪಿಸಿಕೊಳ್ಳುವಂತಾಗಬಾರದು ಎಂದು ಸೊರಕೆ ಒತ್ತಾಯಿಸಿದರು.

    ಸಣ್ಣಪುಟ್ಟ ಕಾರ್ಯಕ್ರಮಗಳಿಗೂ ಭೇಟಿ ನೀಡುವ ಸಂಸದರು ಅವರದೇ ಪಕ್ಷದ ಕಾರ್ಯಕರ್ತ ಕೊಲೆಗೀಡಾದಾಗಲೂ ನೊಂದ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳದಿರುವುದು ಅಮಾನವೀಯ ಎಂದು ಸೊರಕೆ ಅಸಮಾಧಾನ ವ್ಯಕ್ತಪಡಿಸಿದರು.

    ಸಂಬಂಧಿತ ಸುದ್ದಿ: ಉದಯ ಗಾಣಿಗ ಕೊಲೆ ಆರೋಪಿ ಪ್ರಾಣೇಶ್​ ಬಂಧನ; ಪ್ರಶ್ನಿಸಿದ್ದಕ್ಕೆ ಪ್ರಾಣ ತೆಗೆದ ಗ್ರಾಮ ಪಂಚಾಯತ್​ ಅಧ್ಯಕ್ಷ?

    ಸಂಬಂಧಿತ ಸುದ್ದಿ: ಉದಯ ಗಾಣಿಗ ಕೊಲೆ ಪ್ರಕರಣ; ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಜಿಲ್ಲಾ ಗಾಣಿಗ ಸಂಘಟನೆ ಆಗ್ರಹ

    ಸಂಬಂಧಿತ ಸುದ್ದಿ: ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನೂ ಬಂಧಿಸಿ; ಮಾಜಿ ಶಾಸಕ ಗೋಪಾಲ ಪೂಜಾರಿ ಆಗ್ರಹ 

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ ಈ ಕೆಳಗಿನ 'ಐಡಿ'ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ.
      G-Mail ID: [email protected]

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!