Saturday, September 21, 2024
spot_img
More

    Latest Posts

    ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ

    ಬೆಂಗಳೂರು: ರಾಜ್ಯದ ಹಲವೆಡೆ ಗಾಣಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಸನ್ಮಾನಿಸುವ ಕಾರ್ಯ ಮುಂದುವರಿದಿದೆ. ಅದರ ಮುಂದುವರಿದ ಭಾಗವಾಗಿ ಬಾಗಲಕೋಟೆ ತಾಲೂಕು ಗಾಣಿಗ ಸಮಾಜ ಕೂಡ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದೆ.

    ಅಕ್ಟೊಬರ್ 24ರ ರವಿವಾರ ಬೆಳಗ್ಗೆ 10.30ಕ್ಕೆ ಬಾಗಲಕೋಟೆ ನವನಗರದ ಜ್ಯೋತಿ ಬ್ಯಾಂಕ್ ಸಭಾಭವನದಲ್ಲಿ ಈ‌ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಲಿದೆ. ವಿಜಯಪುರದ ವನಶ್ರೀ ಗಾಣಿಗ ಗುರುಪೀಠದ ಡಾ. ಜಯಬಸವಕುಮಾರ ಸ್ವಾಮೀಜಿ, ಮನ್ನಿಕಟ್ಟಿ ದಿಗಂಬರೇಶ್ವರ ಸಂಸ್ಥಾನಮಠದ ಶ್ರೀ ನಿರ್ವಾನ ಸ್ವಾಮೀಜಿ ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ.

    ಬಾಗಲಕೋಟೆ ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ಅಶೋಕ‌ ಲಾಗಲೋಟಿ ಅಧ್ಯಕ್ಷತೆ ವಹಿಸಲಿರುವ ಈ ಕಾರ್ಯಕ್ರಮದಲ್ಲಿ ಅಖಿಲ ಭಾರತ ಗಾಣಿಗ ಸಮಾಜದ ಅಧ್ಯಕ್ಷ ಗುರಣ್ಣ ಗೋಡಿ, ರಾಜ್ಯ ಗಾಣಿಗ ನೌಕರರ ಸಂಘದ ಗೌರವಾಧ್ಯಕ್ಷ ಆರ್.ಜಿ. ಪಾಟೀಲ್ ಮುಂತಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

    ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ.85ಕ್ಕೂ ಅಧಿಕ ಅಂಕ ಪಡೆದ ಹಾಗೂ ಐಐಟಿ ಮತ್ತು ವೈದ್ಯಕೀಯ ಪ್ರವೇಶ ಪಡೆದ ಬಾಗಲಕೋಟೆ ತಾಲೂಕಿನ ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ಅಶೋಕ ಲಾಗಲೋಟಿ ಹಾಗೂ ಪ್ರಧಾನ ಕಾರ್ಯದರ್ಶಿ ನಿಂಗಣ್ಣ ಗೋಡಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ  ಅಶೋಕ ಲಾಗಲೋಟಿ (9686501055)  ನಿಂಗಣ್ಣ ಗೋಡಿ (9538626694), ಸುಜಾತಾ ಕೆಂಚಣ್ಣವರ್ (9591416331)  ಅಥವಾ ನೀಲಮ್ಮ ಇಟಗಿ (8618803077) ಅವರನ್ನು ಸಂಪರ್ಕಿಸಬಹುದು.

    ಸಂಬಂಧಿತ ಸುದ್ದಿ: ಶ್ರೀಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್‌ ಟ್ರಸ್ಟ್‌ ಸೇವೆ 12 ಜಿಲ್ಲೆಗಳಿಗೆ ವಿಸ್ತರಣೆ

    ಸಂಬಂಧಿತ ಸುದ್ದಿ: ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಗಾಣಿಗರೇ ನಿರ್ಣಾಯಕ; ರಮೇಶ ಭೂಸನೂರ ಗೆಲ್ಲುವ ಸಾಧ್ಯತೆ ಅತ್ಯಧಿಕ

    ಸಂಬಂಧಿತ ಸುದ್ದಿ: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಗಾಣಿಗ ಸಮಾಜದ ವಿದ್ಯಾರ್ಥಿಗಳು

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!