Sunday, September 22, 2024
spot_img
More

    Latest Posts

    ಗಾಣಿಗ ಯುವ ಬಳಗದ ವಿಧ್ಯುಕ್ತ ಉದ್ಘಾಟನೆ ಮುಂದೂಡಿಕೆ; ಶೀಘ್ರದಲ್ಲೇ ಮುಂದಿನ ದಿನಾಂಕ ಪ್ರಕಟ

    ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಕುಮಟಾ ಗಾಣಿಗ ಯುವ ಬಳಗ ಹಮ್ಮಿಕೊಂಡಿದ್ದ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಗಾಣಿಗ ಸಮಾಜಕ್ಕೆ ಸಂಬಂಧಿಸಿದ ಚಟುವಟಿಕೆಗಳ ಮೂಲಕ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ಕುಮಟಾ ಗಾಣಿಗ ಯುವ ಬಳಗವು ತಮ್ಮ ಬಳಗದ ವಿಧ್ಯುಕ್ತ ಉದ್ಘಾಟನೆಯನ್ನು ನ. 14ರಂದು ನಡೆಸುವುದು ಎಂದು ನಿರ್ಧರಿಸಿತ್ತು. ಆದರೆ ವಿಧಾನಪರಿಷತ್‌ ನೀತಿ ಸಂಹಿತೆ ಜಾರಿ ಆಗಿರುವುದರಿಂದ ಪೂರ್ವನಿರ್ಧರಿತ ಈ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಗಾಣಿಗ ಯುವ ಬಳಗದ ಅಧ್ಯಕ್ಷ ಗಣೇಶ್‌ ಪ್ರಸಾದ್‌ ಶೆಟ್ಟಿ ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಶೆಟ್ಟಿ ಉಪಸ್ಥಿತಿಯಲ್ಲಿ ವಿಧ್ಯುಕ್ತವಾಗಿ ಉದ್ಘಾಟನೆ ಆಗಲಿದೆ ಗಾಣಿಗ ಯುವ ಬಳಗ

    ಗಾಣಿಗ ಸಮಾಜದವರೇ ಆಗಿರುವ ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕಿ ಶಾರದಾ ಮೋಹನ್‌ ಶೆಟ್ಟಿ ಹಾಗೂ ಇತರ ಗಣ್ಯರ ಉಪಸ್ಥಿತಿಯಲ್ಲಿ ಕುಮಟಾ ಚಿತ್ರಗಿಯ ಶ್ರೀರಾಮಚಂದ್ರ ಸಭಾಭವನದಲ್ಲಿ ನಡೆಯುವುದಿತ್ತು. ಆದರೆ ವಿಧಾನ ಪರಿಷತ್‌ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು  ಬಳಗದ ಆಡಳಿತ ಮಂಡಳಿ ಸಭೆಯಲ್ಲಿ  ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಳಗದ ಗೌರವಾಧ್ಯಕ್ಷ ಗಣಪತಿ ಶೆಟ್ಟಿ ತಿಳಿಸಿದ್ದಾರೆ.

    ಸಂಬಂಧಿತ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಸಹೋದರ, ಪ್ರಹ್ಲಾದ್‌ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ

    ಸಂಬಂಧಿತ ಸುದ್ದಿ: ನ. 14ರಂದು ಶಿರಸಿ ಮಾರಿಕಾಂಬಾ ದೇವಸ್ಥಾನದಲ್ಲಿ ಗಾಣಿಗರ ದೀಪೋತ್ಸವ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!