ಬೆಂಗಳೂರು: ಮುಂಬೈ ಹಾಗೂ ಮಂಗಳೂರಿನಲ್ಲಿ ನಡೆದ ಎರಡು ಪ್ರತ್ಯೇಕ ಸಮಾರಂಭಗಳಲ್ಲಿ ಗಾಣಿಗ ಸಮಾಜದ ಇಬ್ಬರು ಪ್ರಮುಖರಿಗೆ ಸನ್ಮಾನ ನಡೆದಿದೆ. ಮಹಾರಾಷ್ಟ್ರದ ಸಾಂತಾಕ್ರೂಜ್ನಲ್ಲಿ ಸೆಲ್ಯೂಟ್ ತಿರಂಗ- ಕರ್ನಾಟಕ ಸೆಲ್ನ ಪ್ರಥಮ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ನ. 14ರಂದು ನಡೆದಿದೆ. ಇಲ್ಲಿನ ಬಿಲ್ಲವ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಂಬೈ ಸಾಫಲ್ಯ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಸಫಲ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಗಿದೆ.
ಮಂಗಳೂರು ಸಮೀಪದ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೂಲ ನಾಗಬನ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ನಾಗಬನದ ವಿನ್ಯಾಸಕಾರ ಶ್ರೀ ಪ್ರೇಮಾನಂದ ಬಿಜೈ ಇವರನ್ನು ದೇಗುಲದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಂಜಿನಿಯರ್ ಆಗಿರುವ ಇವರು ಸಫಲ ಸೌಹಾರ್ದ ಸಹಕಾರಿ ನಿಯಮಿತ ಇದರ ಉಪಾಧ್ಯಕ್ಷರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಬಿಲ್ಡರ್ಸ್ ಅಸೋಸಿಯೇಷನ್ ಇದರ ಉಪಾಧ್ಯಕ್ಷರು ಕೂಡ ಆಗಿರುತ್ತಾರೆ.
ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ
ಸಂಬಂಧಿತ ಸುದ್ದಿ: ಮಾರ್ದನಿಸುತ್ತಿವೆ ಗಾಣಿಗರ ಕುರಿತು ಕೋಟ ಶ್ರೀನಿವಾಸ ಪೂಜಾರಿಯವರು ಹೇಳಿರುವ ಆ ಮಾತುಗಳು..
ಸಂಬಂಧಿತ ಸುದ್ದಿ: ನಮ್ಮದು ಸಣ್ಣ ಸಮಾಜ, ಕಡಿಮೆ ಜನಸಂಖ್ಯೆ ಎಂಬ ಭಾವನೆ ಬೇಡ; ಗಾಣಿಗ ಸಮುದಾಯಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಲಹೆ