Saturday, September 21, 2024
spot_img
More

    Latest Posts

    ಕೇಂದ್ರ ಸಚಿವರಲ್ಲಿ ಗಾಣಿಗ ನಿಗಮ-ಮಂಡಳಿ ಬೇಡಿಕೆ ಇಟ್ಟ ಮುಖಂಡರು

    ಬೆಂಗಳೂರು: ಗಾಣಿಗ ಸಮಾಜಕ್ಕೆ ನಿಗಮ-ಮಂಡಳಿ ಸ್ಥಾಪಿಸುವಂತೆ ಎದ್ದಿರುವ ಕೂಗು ಈಗ ರಾಜ್ಯ ರಾಜಧಾನಿ ಬೆಂಗಳೂರಿನಿಂದ ರಾಷ್ಟ್ರದ ರಾಜಧಾನಿ ದೆಹಲಿಗೂ ತಲುಪಿದೆ.

    ಗಾಣಿಗ ಸಮಾಜದ ಮುಖಂಡರು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಅವರ ನೇತೃತ್ವದಲ್ಲಿ ದೆಹಲಿಗೆ ನಿಯೋಗ ತೆರಳಿ ಅಲ್ಲಿ ರಾಷ್ಟ್ರಮಟ್ಟದ ನಾಯಕರನ್ನು ಭೇಟಿಯಾಗಿ, ಗಾಣಿಗ ಸಮಾಜಕ್ಕೆ ಪ್ರತ್ಯೇಕ ನಿಗಮ-ಮಂಡಳಿ ನೀಡುವಂತೆ ಕೋರಿದ್ದಾರೆ.

    ಕೇಂದ್ರ ಸಚಿವ ಹಾಗೂ ಗಾಣಿಗ ಸಮಾಜದ ನಾಯಕರೂ ಆಗಿರುವ ರಾಮೇಶ್ವರ್ ತೇಲಿ ಅವರನ್ನು ಭೇಟಿಯಾದ ಗಾಣಿಗ ಸಮುದಾಯದ ಮುಖಂಡರು ಗಾಣಿಗ ಸಮಾಜಕ್ಕೆ ಪ್ರತ್ಯೇಕ ನಿಗಮ-ಮಂಡಳಿ ಸಂಬಂಧ ಬೇಡಿಕೆ ಇಟ್ಟರು.

    ಇದೇ ವೇಳೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನೂ ಭೇಟಿಯಾದ ಮುಖಂಡರು, ಈ ಸಂಬಂಧ ಕೇಂದ್ರ ನಾಯಕರ ಮೇಲೆ ಒತ್ತಡ ಹೇರುವಂತೆ ಕೋರಿದರು.

    ಸಂಬಂಧಿತ ಸುದ್ದಿ: ಕರಾವಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹೋದರ ಸೋಮಭಾಯಿ; 4 ದಿನಗಳ ಪ್ರವಾಸದ ಬಳಿಕ ಗುಜರಾತ್‌ಗೆ ನಿರ್ಗಮನ

    ಸಂಬಂಧಿತ ಸುದ್ದಿ: ಥಾಣೆ ಭಾರತ್‌ ಕೋ-ಆಪರೇಟಿವ್‌ ಬ್ಯಾಂಕ್‌ ರಜತ ಮಹೋತ್ಸವ; ಗೋಪಾಲಕೃಷ್ಣ ಗಾಣಿಗರಿಂದ ಉದ್ಘಾಟನೆ

    ಸಂಬಂಧಿತ ಸುದ್ದಿ: ಮಹಾರಾಷ್ಟ್ರದ ಕ್ರಿಕೆಟ್ ಕ್ಷೇತ್ರದಲ್ಲಿ ‘ಯಶಸ್’ ಸಾಧಿಸುತ್ತಿರುವ ‘ಗಾಣಿಗ ಬ್ರಿಲಿಯಂಟ್’

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!