Sunday, September 22, 2024
spot_img
More

    Latest Posts

    ಗಾಣಿಗರ ನಿಯೋಗದಿಂದ ಸಿಎಂ ಭೇಟಿ, ನಿಗಮ-ಮಂಡಳಿ ಸ್ಥಾಪಿಸುವಂತೆ ಮನವಿ

    ಬೆಂಗಳೂರು: ನಿನ್ನೆಯಷ್ಟೇ ಅಧಿವೇಶನದಲ್ಲಿ ಸದ್ದು ಮಾಡಿದ್ದ ಗಾಣಿಗ ನಿಗಮ-ಮಂಡಳಿ ಸ್ಥಾಪನೆ ವಿಚಾರ ಇಂದು ಮುಖ್ಯಮಂತ್ರಿಯವರ ವರೆಗೂ ತಲುಪಿದೆ. ಅರ್ಥಾತ್, ಇಂದು ಗಾಣಿಗ ಸಮಾಜದ ಮುಖಂಡರ ನಿಯೋಗವೊಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಸಮಾಜಕ್ಕೆ ನಿಗಮ-ಮಂಡಳಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

    ಗಾಣಿಗ ಸಮಾಜದ ಜಗದ್ಗುರುಗಳಾದ ಶ್ರೀಜಯಬಸವ ಕುಮಾರಸ್ವಾಮೀಜಿ, ಕೊಲ್ಹಾರದ ಶ್ರೀಕಲ್ಲಿನಾಥ ಸ್ವಾಮೀಜಿ ಹಾಗೂ ಶಾಸಕರಾದ ಆನಂದ ಸಿದ್ದು ನ್ಯಾಮಗೌಡ ಮತ್ತು ರಮೇಶ್ ಭೂಸನೂರ, ವಿಧಾನಪರಿಷತ್ ಮಾಜಿ ಸದಸ್ಯ ಜಿ.ಎಸ್. ನ್ಯಾಮಗೌಡ ಮತ್ತು ಮಾಜಿ ಶಾಸಕ ಶಿವರಾಜ ಸಜ್ಜನರ, ಅಖಿಲ ಭಾರತ ಗಾಣಿಗ ಸಂಘದ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಚಂದ್ರಶೇಖರ ಕಾಖಂಡಕಿ ಸೇರಿದಂತೆ ಸಮಾಜದ ಮುಖಂಡರನ್ನು ಒಳಗೊಂಡ ನಿಯೋಗ ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿತು.

    ರಾಜ್ಯದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಮತ್ತು 40 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇರುವ ಗಾಣಿಗ ಸಮಾಜಕ್ಕೆ ಪ್ರತ್ಯೇಕ ನಿಗಮ-ಮಂಡಳಿ ಸ್ಥಾಪಿಸಬೇಕು ಎಂದು ನಿಯೋಗ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಿತು.

    ಸಂಬಂಧಿತ ಸುದ್ದಿ: ಅಧಿವೇಶನದಲ್ಲಿ ಸದ್ದು ಮಾಡಿತು ಗಾಣಿಗ ನಿಗಮ-ಮಂಡಳಿ ವಿಚಾರ

    ಸಂಬಂಧಿತ ಸುದ್ದಿ: ಕೇಂದ್ರ ಸಚಿವರಲ್ಲಿ ಗಾಣಿಗ ನಿಗಮ-ಮಂಡಳಿ ಬೇಡಿಕೆ ಇಟ್ಟ ಮುಖಂಡರು

    ಸಂಬಂಧಿತ ಸುದ್ದಿ: ಗಾಣಿಗರಿಗೆ ಎಸ್‌ಟಿ ಮೀಸಲಾತಿ ಬೇಡ, ಗಾಣಿಗ ಅಭಿವೃದ್ಧಿ ನಿಗಮ ಬೇಕೇಬೇಕು..

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!