Saturday, September 21, 2024
spot_img
More

    Latest Posts

    ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ

    ಬೆಂಗಳೂರು: ಉನ್ನತ ವಿದ್ಯಾಭ್ಯಾಸದ ಕನಸು ಕಾಣುತ್ತಿರುವ ಗಾಣಿಗ ಸಮುದಾಯದ ವಿದ್ಯಾರ್ಥಿಗಳಿಗೆ ಇದೊಂದು ಸುವರ್ಣಾವಕಾಶ. ಏಕೆಂದರೆ ಯುವ ಮಾನಸ ಗಾಣಿಗ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ (ರಿ.) ಉಪ್ಪುಂದ ಇವರು ಗಾಣಿಗ ಸಮಾಜದ ವಿದ್ಯಾರ್ಥಿಗಳಿಗೆಂದೇ ಕಾರ್ಯಾಗಾರವೊಂದನ್ನು ಹಮ್ಮಿಕೊಂಡಿದ್ದಾರೆ.

    ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಉಪ್ಪುಂದದಲ್ಲಿನ ಯುವ ಮಾನಸ ಗಾಣಿಗ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ (ರಿ.) ಗಾಣಿಗ ಸಮಾಜದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಗಮನದಲ್ಲಿ ಇರಿಸಿಕೊಂಡು ಅವರ ಶ್ರೇಯೋಭಿವೃದ್ಧಿಗಾಗಿ  ಶ್ರಮಿಸುವ ಯೋಜನೆಯನ್ನು ಹಾಕಿಕೊಂಡಿದೆ. ಅಲ್ಲದೆ ಐಎಎಸ್, ಐಪಿಎಸ್‌, ಕೆಎಎಸ್‌ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆಯೂ ಅರಿವು ಮೂಡಿಸಿ ಮಾರ್ಗದರ್ಶನ ಮಾಡಿ, ತರಬೇತಿ ಹಾಗೂ ಅಗತ್ಯವಿದ್ದರೆ ಆರ್ಥಿಕ ನೆರವು ನೀಡುವ ಉದ್ದೇಶವನ್ನು ಕೂಡ ಹೊಂದಿರುತ್ತದೆ.  ಅದರ ಒಂದು ಅಂಗವಾಗಿ ಟ್ರಸ್ಟ್‌ ಈ ಕಾರ್ಯಾಗಾರವನ್ನು ನಡೆಸಲಿದೆ.

    ಅಂಬೇಡ್ಕರ್‌ ಜಯಂತಿ ದಿನವಾದ ಏ. 14ರಂದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿರುವ ನಮ್ಮ ಸಮಾಜದವರದ್ದೇ ಆದ ಶ್ರೀ ರಾಮ ಲಕ್ಷ್ಮಣ ಕಲ್ಯಾಣ ಮಂಟಪದಲ್ಲಿ ಈ ಕಾರ್ಯಾಗಾರ ನಡೆಯಲಿದೆ. ಪಿಯುಸಿಯಿಂದ ಪದವಿವರೆಗಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಈ ಕಾರ್ಯಾಗಾರದ ಪ್ರಯೋಜನ ಪಡೆಯಬಹುದು. ಅಂದಹಾಗೆ ಇದು ಉಡುಪಿ-ಶಿವಮೊಗ್ಗ-ಉತ್ತರಕನ್ನಡ ಜಿಲ್ಲೆಗಳ ವಿದ್ಯಾರ್ಥಿವೃಂದಕ್ಕೆ ಸೀಮಿತವಾಗಿ ನಡೆಯಲಿದೆ. ಆಸಕ್ತರು ಈ ಕೆಳಗಿನ ಲಿಂಕ್‌ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು.

    ನೋಂದಣಿಗೆ ಲಿಂಕ್‌: https://forms.gle/7iy4Fa3vF69TNpzL9

    ಹೆಚ್ಚಿನ ಮಾಹಿತಿಗೆ ಸಂಪರ್ಕ: ಯು. ಅನಂತ ಗಾಣಿಗ- 9740541279

    ಸಂಬಂಧಿತ ಸುದ್ದಿ: ಮಹತ್ವಾಕಾಂಕ್ಷಿ ವಿದ್ಯಾರ್ಥಿಗಳಿಗಾಗಿ ಯುವ ಮಾನಸ ಗಾಣಿಗ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್ ಸ್ಥಾಪನೆ

    ಸಂಬಂಧಿತ ಸುದ್ದಿ: ಇಂದಿನ ನ್ಯಾಷನಲ್ ಕಾಲೇಜನ್ನು ಆರಂಭಿಸಿದ್ದು ಅಂದಿನ ದೊಡ್ಡಣ್ಣ ಶೆಟ್ಟರೇ..

    ಸಂಬಂಧಿತ ಸುದ್ದಿ: ನಿಮಗೆ ಚುನಾವಣೆ ಗೆಲ್ಲಲು ಮೋದಿ ಹೆಸರು ಬೇಕು, ಗಾಣಿಗ ಸಮಾಜ ಬೇಡವೇ..?

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!