Saturday, September 21, 2024
spot_img
More

    Latest Posts

    ಡಿವೈಎಸ್‌ಪಿ ಶಿವಕುಮಾರ್‌ಗೆ ಮುಖ್ಯಮಂತ್ರಿ ಪದಕ ಪ್ರದಾನ

    ಬೆಂಗಳೂರು: ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್‌ ಅಧಿಕಾರಿ ಹಾಗೂ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ನೀಡುವ ಮುಖ್ಯಮಂತ್ರಿ ಪದಕ ಪ್ರದಾನ ಇಂದು ನಡೆಯಿತು.

    ರಾಜ್ಯದ 135 ಪೊಲೀಸ್ ಅಧಿಕಾರಿ-ಸಿಬ್ಬಂದಿ 2021ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಆಗಿದ್ದು, ಆ ಪೈಕಿ ಬೆಂಗಳೂರು ಕೇಂದ್ರ ವಲಯದ ಡಿವೈಎಸ್‌ಪಿ ಎಚ್‌.ಪಿ. ಶಿವಕುಮಾರ್‌ ಕೂಡ ಒಬ್ಬರು.

    ಮೂಲತಃ ಮೈಸೂರಿನವರಾದ ಇವರು ಪೊಲೀಸ್‌ ಧ್ವಜದಿನವಾದ ಇಂದು ಬೆಂಗಳೂರಿನ ಕೋರಮಂಗಲದ ಕೆಎಸ್‌ಆರ್‌ಪಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪದಕವನ್ನು ಸ್ವೀಕರಿಸಿದರು.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಪದಕ ಪ್ರದಾನ

    ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಮತ್ತಿತರ ಹಿರಿಯ ಪೊಲೀಸ್‌ ಅಧಿಕಾರಿಗಳು ಉಪಸ್ಥಿತರಿದ್ದರು.

    ಮುಖ್ಯಮಂತ್ರಿ ಪದಕ ಸ್ವೀಕರಿಸಿದ ಸಂತೋಷದಲ್ಲಿ ಡಿವೈಎಸ್‌ಪಿ ಶಿವಕುಮಾರ್

    ಡಿವೈಎಸ್‌ಪಿ ಶಿವಕುಮಾರ್‌ ಅವರಿಗೆ ಅಭಿನಂದನೆಗಳು ಸಲ್ಲಿಸುತ್ತ, ಅವರ ವೃತ್ತಿಜೀವನದಲ್ಲಿ ಮತ್ತಷ್ಟು ಯಶಸ್ಸು ಸಿಗಲಿ ಎಂದು ಗ್ಲೋಬಲ್‌ ಗಾಣಿಗ.ಕಾಮ್‌ ಹಾರೈಸುತ್ತಿದೆ.

    ಸಂಬಂಧಿತ ಸುದ್ದಿ: ಸೇಲಂ ಎಸ್‌ಪಿ ದೀಪಾ ಗಾಣಿಗೇರ್ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

    ಸಂಬಂಧಿತ ಸುದ್ದಿ: ಪ್ರಜ್ಞಾ ಪ್ರಕಾಶ್‌ಗೆ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ

    ಸಂಬಂಧಿತ ಸುದ್ದಿ: ಸಂತೋಷ ಗಾಣಿಗರಿಗೆ ಮುಖ್ಯಮಂತ್ರಿ ಚಿನ್ನದ ಪದಕ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!