Sunday, September 22, 2024
spot_img
More

    Latest Posts

    ಬ್ರಹ್ಮಕಲಶ-ನಾಗಬ್ರಹ್ಮಮಂಡಲ ಪೂರ್ವಭಾವಿ ಸಮಾಲೋಚನೆ

    ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಆದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಸಲು ಉದ್ದೇಶಿಸಲಾಗಿರುವ ಬ್ರಹ್ಮಕಲಶ, ನಾಗಬ್ರಹ್ಮಮಂಡಲ ಕುರಿತ ಪೂರ್ವಭಾವಿ ಸಮಾಲೋಚನಾ ಸಭೆಯು ಇತ್ತೀಚೆಗೆ ನಡೆಯಿತು.

    ಈ ಸಮಾಲೋಚನಾ ಸಭೆಯಲ್ಲಿ ಉಳಿಯ ಶ್ರೀ ಉಳ್ಳಾಲ್ತಿ ಧರ್ಮರಸರ ಕ್ಷೇತ್ರದ ಧರ್ಮದರ್ಶಿ ದೇವು ಮೂಲ್ಯಣ್ಣಅವರು ಭಾಗವಹಿಸಿದ್ದು, ಧಾರ್ಮಿಕ ಹಿನ್ನೆಲೆ ಹೊಂದಿರುವ ಅವಿಭಜಿತ ಜಿಲ್ಲೆಯಲ್ಲಿ ಗಾಣಿಗ ಸಮುದಾಯಕ್ಕೆ ಹಲವೆಡೆ ದೈವ ದೇವರ ಆರಾಧನೆ  ಮಾಡುವ ಅವಕಾಶ ದೊರೆತಿರುವುದು ಪೂರ್ವಜನ್ಮದ ಪುಣ್ಯದ ಫಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಮುಂದಿನ ವರ್ಷದ ಫೆಬ್ರವರಿಯಲ್ಲಿ ನಡೆಸಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಮೇ 8ರ ಭಾನುವಾರ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು. ದೇವಳದ ಧರ್ಮದರ್ಶಿ ಮೋನಪ್ಪ ಮೇಸ್ತ್ರಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

    ಮುಂಬೈ ಸಾಫಲ್ಯ ಯಾನೆ ಗಾಣಿಗ ಸೇವಾ ಸಂಘದ ಅಧ್ಯಕ್ಷ ಶ್ರೀನಿವಾಸ ಪಿ. ಸಪಲ್ಯ, ಮಾಜಿ ಅಧ್ಯಕ್ಷ ಓಂಪ್ರಕಾಶ್ ರಾವ್, ಮಾಜಿ ಕಾರ್ಯದರ್ಶಿ ಭಾಸ್ಕರ ಅಮೀನ್, ಬಂಟ್ವಾಳ ತಾಲೂಕು ಗಾಣಿಗರ ಸೇವಾ ಸಂಘದ ಅಧ್ಯಕ್ಷ ಬಿ.ರಘು ಸಪಲ್ಯ, ಸುಮಂಗಲಾ ಕ್ರೆಡಿಟ್ ಸೊಸೈಟಿ ಅಧ್ಯಕ್ಷ  ನಾಗೇಶ ಕಲ್ಲಡ್ಕ, ಬಂಟ್ವಾಳ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮಾಧವ ಎಸ್. ಮಾವೆ ಸಭೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

    ಪ್ರಮುಖರಾದ ಸಂಜೀವ ಅಡ್ಯಾರು, ಭಾಸ್ಕರ ಎಡಪದವು , ಪದ್ಮನಾಭ ಕಟೀಲು, ವೆಂಕಟೇಶ್ ಕದ್ರಿ,  ಪ್ರೇಮಾನಂದ ಸಾಲ್ಯಾನ್, ಮೋಹನ್ ಕೆ. ಶ್ರೀಯಾನ್ ರಾಯಿ, ಡಾ.ರವೀಂದ್ರ ಕಂದಾವರ, ರತಿಕಾ ಶ್ರೀನಿವಾಸ್ ಮುಂಬೈ, ಕೇಶವ ಪೊಳಲಿ,  ವಿವೇಕಾನಂದ ವಾಮಂಜೂರು ಮತ್ತಿತರರು ಸಭೆಯಲ್ಲಿದ್ದರು. ದೇವಳದ ಟ್ರಸ್ಟಿ ರಾಜೇಶ್ ಗಾಣಿಗ ಪ್ರಾಸ್ತಾವಿಕ ಮಾತನಾಡಿದರು. ತಿಲಕ್ ಶೆಟ್ಟಿ ಪೆರಾರ  ಸ್ವಾಗತಿಸಿ, ವಂದಿಸಿದರು.

    ಸಂಬಂಧಿತ ಸುದ್ದಿ: ಶ್ರೀದುರ್ಗಾಪರಮೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ, ಬ್ರಹ್ಮ ನಾಗಮಂಡಲ

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ

    ಸಂಬಂಧಿತ ಸುದ್ದಿ: ಥಾಣೆ ನಿತ್ಯಾನಂದ ಸೇವಾ ಸಂಸ್ಥೆಯಿಂದ ಗಣೇಶಪುರಿ ಯಾತ್ರೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!