Saturday, September 21, 2024
spot_img
More

    Latest Posts

    ಗಾಣಿಗ ಸಮುದಾಯ ಹಾಗೂ ಗ್ರಾಮಸ್ಥರಿಂದ ಶುಕ್ರವಾರ ಶ್ರೀಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ

    ಬೆಂಗಳೂರು: ಮಂಡ್ಯ ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಬೂಕನಕೆರೆ ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಉದ್ಘಾಟನೆ ಹಾಗೂ ಮೂರ್ತಿ ಪ್ರತಿಷ್ಠಾಪನೆ ಸಮಾರಂಭವು ಜೂ. 1, 2 ಮತ್ತು 3ರಂದು ನಡೆಯಲಿದೆ.

    ದೇವಸ್ಥಾನದ ಉದ್ಘಾಟನೆ ಸಮಾರಂಭವು ಜೂ. 3ರಂದು ನಡೆಯಲಿದ್ದು, ವಿಜಯಪುರ ಜಿಲ್ಲೆಯ ಶ್ರೀದಿಗಂಬೇಶ್ವರ ಸಂಸ್ಥಾನ ಮಠದ ಜಗದ್ಗುರು ಶ್ರೀಯೋಗಿ ಕಲ್ಲಿನಾಥ ದೇವರು ಹಾಗೂ ವನಶ್ರೀ ಮಠದ ಗಾಣಿಗ ಗುರುಪೀಠದ ಶ್ರೀಡಾ.ಜಯಬಸವಕುಮಾರ ಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಲಿರುವರು.

    ಅಲ್ಲದೆ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಡಾ.ಕೆ.ಸಿ. ನಾರಾಯಣ ಗೌಡ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕರಾದ ಕೆ. ದಿನಕರ ಶೆಟ್ಟಿ, ಆನಂದ ನ್ಯಾಮಗೌಡ, ರಮೇಶ್‌ ಭೂಷಣ್‌, ವಿಧಾನಪರಿಷತ್‌ ಮಾಜಿ ಸದಸ್ಯ ವಿ.ಆರ್.‌ ಸುದರ್ಶನ್‌, ಅಖಿಲ ಭಾರತ ಗಾಣಿಗರ ಸಂಘದ ಅಧ್ಯಕ್ಷ ಗುರಣ್ಣ ಗೋಡಿ, ಮಾಜಿ ಶಾಸಕ ಕೆ.ಬಿ. ಚಂದ್ರಶೇಖರ್‌, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯ ಎಚ್‌.ಟಿ. ಮಂಜಣ್ಣ, ಬೂಕನಕೆರೆ ಮಿತ್ರ ಫೌಂಡೇಷನ್‌ ಅಧ್ಯಕ್ಷ ವಿಜಯ್‌ ರಾಮೇಗೌಡ, ತಾಲೂಕು ಪಂಚಾಯತ್‌ ಮಾಜಿ ಸದಸ್ಯ ಜವರಾಯಿ ಗೌಡ ಮುಂತಾದವರು ಭಾಗವಹಿಸಲಿದ್ದಾರೆ.

    ಈ ಸಮಾರಂಭದಲ್ಲಿ ಸಮುದಾಯದವರು ಹಾಗೂ ಊರ-ಪರವೂರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೂಕನಕೆರೆ ಗಾಣಿಗ ಜನಾಂಗ, ಶ್ರೀಲಕ್ಷ್ಮೀದೇವಿ ಗಾಣಿಗ ಸಂಘ (ರಿ.) ಮತ್ತು ಬೂಕನಕೆರೆ ಹಾಗೂ ಸುತ್ತಲಿನ ಗ್ರಾಮಸ್ಥರು ವಿನಂತಿಸಿಕೊಂಡಿದ್ದಾರೆ.

    ಸಂಬಂಧಿತ ಸುದ್ದಿ: ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪವೈಭವ

    ಸಂಬಂಧಿತ ಸುದ್ದಿ: ಪುರಾಣಪ್ರಸಿದ್ಧ ಗೋಕರ್ಣದಲ್ಲಿ ಗಾಣಿಗರಿಂದ ನಡೆಯಿತು ಕಾರ್ತಿಕ ಮಾಸದ ಪ್ರಥಮ ಪೂಜೆ

    ಸಂಬಂಧಿತ ಸುದ್ದಿ: ಪುರಾಣ ಪ್ರಸಿದ್ಧ ಶ್ರೀರಾಮಚಂದ್ರ ದೇವಸ್ಥಾನದಲ್ಲಿ ವರ್ಧಂತಿ ಉತ್ಸವ ಸಂಪನ್ನ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!