Saturday, September 21, 2024
spot_img
More

    Latest Posts

    ರಾಜ್ಯಮಟ್ಟದ ‘ಗ್ರಾಮೀಣ ಶಿಕ್ಷಣ ರತ್ನ’ ಪ್ರಶಸ್ತಿಗೆ ಶಿಕ್ಷಕ ತಿಮ್ಮಪ್ಪ ಗಾಣಿಗ ಆಯ್ಕೆ

    ಬೆಂಗಳೂರು: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕಂಚಿಕಾನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಅವರು ರಾಜ್ಯಮಟ್ಟದ `ಗ್ರಾಮೀಣ ಶಿಕ್ಷಣ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    ಕರ್ನಾಟಕ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುಬ್ಬಳ್ಳಿ ವತಿಯಿಂದ ಶನಿವಾರ ಹುಬ್ಬಳ್ಳಿಯಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಬೈಂದೂರು ತಾಲೂಕು ತಗ್ಗರ್ಸೆಯವರಾದ ತಿಮ್ಮಪ್ಪ ಗಾಣಿಗ ಅವರು 1990ರಲ್ಲಿ ಶಿಕ್ಷಕ ವೃತ್ತಿ ಸೇರಿ ಕಾರ್ಯಳ ಜೊಗಳಬೆಟ್ಟುವಿನಲ್ಲಿ ತಮ್ಮ ಸೇವೆ ಆರಂಭಿಸುತ್ತಾರೆ. ಬಳಿಕ ಕ್ರಮವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಯಾನಗರ, ನಾಯ್ಕನಕಟ್ಟೆ ಹಾಗೂ ಬೈಂದೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

    ಮುಂದೆ ಭಡ್ತಿ ಹೊಂದಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆಯಲ್ಲಿ ಮುಖ್ಯ ಶಿಕ್ಷಕರಾಗಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದೆರಡು ವರ್ಷಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಂಚಿಕಾನುವಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    (ಚಿತ್ರ-ಮಾಹಿತಿ ಕೃಪೆ: http://www.kundapraa.com )

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ಸಮಾಜದ ಮನವಿಗೆ ಸ್ಪಂದಿಸಿದ ಯಕ್ಷಗಾನ ಸಮ್ಮೇಳನ ಸಮಿತಿ; ಸಮ್ಮಾನಕ್ಕೆ ಬಿರ್ತಿ ಬಾಲಕೃಷ್ಣ ಗಾಣಿಗ ಆಯ್ಕೆ

    ಸಂಬಂಧಿತ ಸುದ್ದಿ: ಕರ್ನಾಟಕದಲ್ಲೂ ನಮ್ಮ ಪರಿವಾರ ಇದೆ ಎಂಬ ಭಾವನೆ ಮೂಡಿದೆ: ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ


    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!