Saturday, September 21, 2024
spot_img
More

    Latest Posts

    ಅಭಿವೃದ್ಧಿ ನಿಗಮ ಸ್ಥಾಪನೆ: ಕುಷ್ಟಗಿಯಲ್ಲಿ ಗಾಣಿಗರ ಸಭೆ-ಸಂಭ್ರಮ

    ಬೆಂಗಳೂರು: ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದಕ್ಕೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಗಾಣಿಗ ಸಮಾಜದವರು ಸಂಭ್ರಮಿಸಿದ್ದು, ಪ್ರತ್ಯೇಕ ಸಭೆಯನ್ನೂ ನಡೆಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಕುಷ್ಟಗಿಯ ಬಸವ ಭವನದಲ್ಲಿ ಗಾಣಿಗ ಸಮುದಾಯದ ಪ್ರಮುಖರು ಸಭೆ ಸೇರಿ ಅಶ್ವಾರೂಢ ಬಸವೇಶ್ವರರ ಪುತ್ಥಳಿಗೆ ಪುಷ್ಪಗಳನ್ನು ಅರ್ಪಿಸಿ ವಿಜಯೋತ್ಸವ ಆಚರಿಸಿದರು. ಬಳಿಕ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಿಗಮ ಸ್ಥಾಪನೆ ಮೂಲಕ ಗಾಣಿಗ ಸಮುದಾಯದ ಬಹುಕಾಲದ ಬೇಡಿಕೆ ಈಡೇರಿದೆ ಎಂದು ಸಂತೋಷ ವ್ಯಕ್ತಪಡಿಸಿದರು.

    ನಿಗಮ ಮಂಡಳಿ ಸ್ಥಾಪನೆಗೆ ಕಾರಣರಾದ ಗಾಣಿಗ ಗುರುಪೀಠದ ಶ್ರೀಗಳು, ಜನಪ್ರತಿನಿಧಿಗಳು ಹಾಗೂ ಪ್ರಮುಖರ ಹೋರಾಟವನ್ನು ಸ್ಮರಿಸಿದರು. ಕುಷ್ಟಗಿ ಗಾಣಿಗ ಸಮುದಾಯದ ಅಧ್ಯಕ್ಷ ಸಂಗನಗೌಡ ಪಾಟೀಲ್, ಪ್ರಮುಖರಾದ ಅಮರೇಗೌಡ ಪಾಟೀಲ್ ಜಾಲಿಹಾಳ, ಬಸವಂತಪ್ಪ ಕಂಬಳಿ, ಶಂಕರಗೌಡ ಪಾಟೀಲ್ ಜಾಲಿಹಾಳ, ಬಸವರಾಜ ಮಲಕಾಪೂರ, ಮಾಜಿ ಸದಸ್ಯ ಮಹಾಂತೇಶ ಬದಾಮಿ, ನಾಗನಗೌಡ ಪೊಲೀಸ್‌ ಪಾಟೀಲ್‌ ಮತ್ತಿತರರು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಗಾಣಿಗ ನಿಗಮ ಸ್ಥಾಪನೆ: ಸಮುದಾಯದ ಸಂಘ-ಸಂಸ್ಥೆಗಳಿಂದ ಸಂಭ್ರಮಾಚರಣೆ, ಸಿಎಂಗೆ ಅಭಿನಂದನೆ

    ಸಂಬಂಧಿತ ಸುದ್ದಿ: ಪವರ್‌ಲಿಫ್ಟರ್‌ ಆಗಬೇಕೆನ್ನುವವರಿಗೆ ಇಲ್ಲಿದೆ ಭಾರತದ ಬಲಿಷ್ಠ ಪುರುಷನಿಂದಲೇ ತರಬೇತಿ!

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!