Saturday, September 21, 2024
spot_img
More

    Latest Posts

    ಬಾರ್ಕೂರು ದೇವಸ್ಥಾನದಲ್ಲಿ ಗುರು ಪೂರ್ಣಿಮೆ ಆಚರಣೆ, ಸತ್ಯನಾರಾಯಣ ಪೂಜೆ

    ಬೆಂಗಳೂರು: ಸೋಮಕ್ಷತ್ರಿಯ ಗಾಣಿಗ ಸಮಾಜದವರ ಕುಲದೇವರಾದ ಬಾರ್ಕೂರು ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಗುರು ಪೂರ್ಣಿಮೆಯನ್ನು ಆಚರಿಸಲಾಯಿತು.

    ಗುರು ಪೂರ್ಣಿಮೆ ಪ್ರಯುಕ್ತ ಜುಲೈ 3ರಂದು ಗುರು ಪೂರ್ಣಿಮೆ ಆಚರಿಸುವ ಜತೆಗೆ ದೇವಸ್ಥಾನದ ಸಮೀಪ ಇರುವ ಹಿಂದಿನ ಗುರುಗಳ ವೃಂದಾವನಕ್ಕೆ ಪೂಜೆಯನ್ನೂ ಸಲ್ಲಿಸಲಾಯಿತು.

    ಸೋಮಕ್ಷತ್ರಿಯ ಸಮಾಜದವರ ಈಗಿನ ಗುರುಗಳಾದ ಶ್ರೀಶ್ರೀಶ್ರೀ ಲಕ್ಷ್ಮೀಂದ್ರ ತೀರ್ಥ ಶ್ರೀಪಾದಂಗಳವರು..

    ಅಲ್ಲದೆ ಪ್ರತಿ ಹುಣ್ಣಿಮೆಯಂದು ಕುಲದೇವರ ಸನ್ನಿಧಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯುತ್ತಿದ್ದು, ಗುರು ಪೂರ್ಣಿಮೆಯಂದು ಜ್ಯೋತಿಷ್ಯ ರತ್ನ ಉದಯ್ ಕುಮಾರ್ ಬ್ರಹ್ಮಾವರ ಮತ್ತು ಮೋಹಿನಿ ಉದಯ್ ಕುಮಾರ್  ದಂಪತಿಯ ಸಂಕಲ್ಪದೊಂದಿಗೆ ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ಜರುಗಿತು.

    ಗುರು ಪೂರ್ಣಿಮೆಯ ಈ ಸಂದರ್ಭದಲ್ಲಿ ಸಮಾಜ ಬಾಂಧವರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸಿದ ಕುಲದೇವರ ಮತ್ತು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.

    ಸತ್ಯನಾರಾಯಣ ಪೂಜೆಯ ಸಂಕಲ್ಪ

    ಸಂಬಂಧಿತ ಸುದ್ದಿ: Global Ganiga: ಮೂರನೇ ವರ್ಷಕ್ಕೆ ಪದಾರ್ಪಣೆ; ಈ ತಾಣ, ಈ ಪ್ರಯಾಣ ನಿಮಗೇ ಅರ್ಪಣೆ..

    ಸಂಬಂಧಿತ ಸುದ್ದಿ: ಯಾರಾಗುತ್ತಾರೆ ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಚೊಚ್ಚಲ ಅಧ್ಯಕ್ಷ?

    ಸಂಬಂಧಿತ ಸುದ್ದಿ: ಉಡುಪಿ ಪರ್ಯಾಯೋತ್ಸವಕ್ಕೆ ಗಾಣಿಗ ಸಮಾಜದಿಂದ ಅಕ್ಕಿಮುಡಿ ಸಮರ್ಪಣೆ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!