Saturday, September 21, 2024
spot_img
More

    Latest Posts

    ಕಾನೂನು ಅರಿವಿನಿಂದ ವಿದ್ಯಾರ್ಥಿಗಳ ಸಬಲೀಕರಣ: ಅರ್ಪಿತಾ ಹರೀಶ್‌

    ಬೆಂಗಳೂರು: ಕಾನೂನು ಅರಿವಿನಿಂದ ವಿದ್ಯಾರ್ಥಿಗಳ ಸಬಲೀಕರಣ ಮತ್ತು ಅವರ ಏಳಿಗೆ ಸಾಧ್ಯ ಎಂದು ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅರ್ಪಿತಾ ಹರೀಶ್‌ ಅಭಿಪ್ರಾಯಪಟ್ಟರು.

    ರಾಮನಗರ ಜಿಲ್ಲೆಯ ಕಸಬಾ ಹೋಬಳಿಯ ಸುಗ್ಗನಹಳ್ಳಿ ಗ್ರಾಮದಲ್ಲಿನ ಸ್ವಾತಂತ್ರ್ಯಪೂರ್ವ ಕಾಲದ ಪದವಿಪೂರ್ವ ಕಾಲೇಜಿನಲ್ಲಿ ನ. 9ರಂದು ನಡೆದ “ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ”ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು. ಅರ್ಪಿತಾ ಅವರು ತಮ್ಮ ಪತಿ ವಕೀಲರೂ ಆಗಿರುವ ಹರೀಶ್‌ ಕುಮಾರ್‌ ಅವರೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಸಂವಿಧಾನ ಪೀಠಿಕೆ ಓದಿಸುವುದರ ಜೊತೆಗೆ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ, ಬಾಲಕಾರ್ಮಿಕ ನಿಷೇಧ ಕಾಯ್ದೆಗಳ ಬಗ್ಗೆ ಅರ್ಪಿತಾ ಹರೀಶ್‌ ಮತ್ತು ಹರೀಶ್‌ ಕುಮಾರ್‌ ಇಲ್ಲಿನ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.  ಈ ಮೂಲಕ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಕಾನೂನು ಅರಿವು ಮೂಡಿಸಲಾಯಿತು.

    ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಪ್ರದೀಪ್,  ಉಪನ್ಯಾಸಕರಾದ ಚಂದ್ರಶೇಖರಯ್ಯ, ಹರೀಶ್, ದಿವ್ಯದರ್ಶಿನಿ, ದೇವರಾಜ್, ಶೃತಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಂಬಂಧಿತ ಸುದ್ದಿ: ಟೀಮ್‌ ಏಕತಾ: ಇದು ಈ ಸಮಾಜದಲ್ಲಿ ಸಂಕಷ್ಟದಲ್ಲಿ ಇರುವವರ ಆಶಾಕಿರಣ

    ಸಂಬಂಧಿತ ಸುದ್ದಿ: ಸುಗ್ಗನಹಳ್ಳಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಅರ್ಪಿತಾ ಹರೀಶ್‌ ಅವಿರೋಧ ಆಯ್ಕೆ

    ಸಂಬಂಧಿತ ಸುದ್ದಿ: ಪಿಎಂ-ವಿಶ್ವಕರ್ಮ ಯೋಜನೆಯಲ್ಲಿ ಗಾಣಿಗರನ್ನೂ ಸೇರಿಸುವಂತೆ ಪ್ರಧಾನಿ ಮೋದಿಗೆ ಮನವಿ

    ಗಾಣಿಗ ಸಮಾಜದ ಕುರಿತ ಸುದ್ದಿ-ಸಮಾಚಾರ, ವ್ಯಕ್ತಿ-ವಿಶೇಷ, ಸಾಧನೆ-ಸಮಾರಂಭ, ಆಚಾರ-ವಿಚಾರ, ಕಥೆ-ಕವನ, ಅಡುಗೆ-ಆರೋಗ್ಯ ಇತ್ಯಾದಿ ಮಾಹಿತಿಗಳನ್ನು ಫೋಟೋ ಸಹಿತ [email protected] ಗೆ ಇ-ಮೇಲ್ ಮಾಡಿ. ಮಾಹಿತಿ ಜೊತೆ ನಿಮ್ಮ ಹೆಸರು, ಮೊಬೈಲ್ ಫೋನ್ ನಂಬರ್ ನಮೂದಿಸುವುದು ಕಡ್ಡಾಯ. ಹೆಚ್ಚಿನ ಮಾಹಿತಿಗೆ 9449238494ಗೆ ವಾಟ್ಸ್ಆ್ಯಪ್ ಮಾಡಿ.

    Latest Posts

    Read This

    error: Content is protected !!